ಮನರಂಜನೆಸಿನಿಮಾಸೆಲೆಬ್ರಿಟಿ

Neha Dupia: ಎರಡನೇ ಮಗುವಿಗೆ ಜನ್ಮ ನೀಡಿದ ನಟಿ ನೇಹಾ ಧೂಪಿಯಾ

ನಟಿ ನೇಹಾ ಧೂಪಿಯಾ ಅಕ್ಟೋಬರ್ 3ರಂದು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ನೇಹಾ ಪತಿ ಅಂಗದ್ ಅವರು ಇನ್ ಸ್ಟಾಗ್ರಾಂನಲ್ಲಿ ಈ ಸಿಹಿಸುದ್ದಿಯನ್ನು ಹಂಚಿಕೊಂಡಿದ್ದಾರೆ.

ನಟಿ ನೇಹಾ ಮತ್ತು ಅಂಗದ್ ಅವರಿಗೆ ಈಗಾಗಲೇ ಒಬ್ಬ ಹೆಣ್ಣು ಮಗಳಿದ್ದಾರೆ. ಇದೀಗ ನಟಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ನೇಹಾ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

ಜುಲೈ 2021ರಲ್ಲಿ ನೇಹಾ ಧೂಪಿಯಾ ಮತ್ತು ಅಂಗದ್ ಅವರು ತಮ್ಮ ಎರಡನೇ ಮಗುವನ್ನು ನಿರೀಕ್ಷಿಸುತ್ತಿರುವುದಾಗಿ ಘೋಷಿಸಿದರು. ಇದೀಗ ಅಂಗದ್ ಬೇಡಿ ಈ ವಿಚಾರವನ್ನು ತಮ್ಮ ಇನ್ ಸ್ಟಾಗ್ರಾಂನಲ್ಲಿ ತಿಳಿಸಿದ್ದು, ದೇವರು ಇಂದು ನಮಗೆ ಗಂಡು ಮಗುವನ್ನು ನೀಡಿದ್ದಾನೆ ಎಂದು ತಿಳಿಸಿ ಮಗುವಿನ ಆಗಮನದ ಸಂತಸವನ್ನು ವ್ಯಕ್ತಪಡಿಸಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button