Latestಜಿಲ್ಲಾ ಸುದ್ದಿಬೆಳಗಾವಿಮನರಂಜನೆಸೆಲೆಬ್ರಿಟಿ

ನಟ ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ, ಶೀಘ್ರ ದಿನಾಂಕ ಪ್ರಕಟ: ಸಿಎಂ ಬೊಮ್ಮಾಯಿ

ಬೆಳಗಾವಿ: ನಟ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕುರಿತು ಶೀಘ್ರ ದಿನಾಂಕ ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ವಿಧಾನಸಭೆಯಲ್ಲಿ ಹೇಳಿದ್ದಾರೆ.

ಅಗಲಿದ ಗಣ್ಯರಿಗೆ ಶ್ರದ್ಧಾಂಜಲಿ ನಿರ್ಣಯ ಕುರಿತ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಲಾ ಕ್ಷೇತ್ರಕ್ಕೆ ನಟ ಪುನೀತ್ ರಾಜ್ ಕುಮಾರ್ ಅವರ ಕೊಡುಗೆ, ಸಾಧನೆಯನ್ನು ಸ್ಮರಿಸಿದರು.

ಮುಂಬರುವ ದಿನಗಳಲ್ಲಿ ಪುನೀತ್ ರಾಜ್ ಕುಮಾರ್ ಅವರಿಗೆ ಪದ್ಮಶ್ರೀ ಪುರಸ್ಕಾರ ನೀಡುವ ಸಂಬಂಧ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ತಿಳಿಸಿದರು.

ಇದೇ ವೇಳೆ ಸೇನಾಪಡೆ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಮಾಜಿ ರಾಜ್ಯಪಾಲ ಕೆ. ರೋಸಯ್ಯ ಸೇರಿದಂತೆ ಅಗಲಿದ ಗಣ್ಯರಿಗಗೆ ಸಿಎಂ ಶ್ರದ್ಧಾಂಜಲಿ ಅರ್ಪಿಸಿದರು.

Related Articles

Leave a Reply

Your email address will not be published. Required fields are marked *

Back to top button