Breaking Newsಮನರಂಜನೆಸಿನಿಮಾಸೆಲೆಬ್ರಿಟಿ
ಧನುಷ್ 44 ಚಿತ್ರೀಕರಣದ ವೇಳೆ ಬಿದ್ದು ಪೆಟ್ಟು ಮಾಡಿಕೊಂಡ ನಟ ಪ್ರಕಾಶ್ ರಾಜ್

ಚೆನ್ನೈನಲ್ಲಿ ಧನುಷ್ ಅಭಿನಯದ ಧನುಷ್ 44 ಚಿತ್ರದ ಚಿತ್ರೀಕರಣದ ವೇಳೆ ನಟ ಪ್ರಕಾಶ್ ರಾಜ್ ಅವರು ಬಿದ್ದು ಗಾಯಗೊಂಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ.
ಈ ಘಟನೆಯಲ್ಲಿ ಅವರ ಕೈಗೆ ಸಣ್ಣ ಮುರಿತ ಉಂಟಾಗಿದೆ. ಹಾಗಾಗಿ ಖ್ಯಾತ ಮೂಳೆ ಶಸ್ತ್ರಚಿಕಿತ್ಸ ಡಾ.ಗುರುವ ರೆಡ್ಡಿ ಅವರ ಬಳಿ ಚಿಕಿತ್ಸೆ ಪಡೆಯಲು ಹೈದರಾಬಾದ್ ಗೆ ತೆರಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಈ ಬಗ್ಗೆ ಟ್ವೀಟರ್ ನಲ್ಲಿ ನಟ ಪ್ರಕಾಶ್ ರಾಜ್ ಮಾಹಿತಿ ನೀಡಿದ್ದಾರೆ. ಯಾರು ಚಿಂತಿಸಬೇಡಿ ಎಂದು ತಿಳಿಸಿದ್ದಾರೆ.
ನಟ ಪ್ರಕಾಶ್ ರಾಜ್ ಅವರು ದಕ್ಷಿಣ ಚಿತ್ರರಂಗದ ಒಬ್ಬ ಖ್ಯಾತ ನಟ. ಕನ್ನಡ, ತಮಿಳು, ತೆಲುಗು ಸೇರಿದಂತೆ ಹಲವು ಚಿತ್ರರಂಗಗಳಲ್ಲಿ ನಟಿಸಿ ಜನರ ಮೆಚ್ಚುಗೆ ಪಡೆದಿದ್ದಾರೆ. ಇವರು ಹೈದರಾಬಾದ್ ನಲ್ಲಿ ಮುಂಬರುವ ಮೂವಿ ಆರ್ಟಿಸ್ಟ್ಸ್ ಅಸೋಸಿಯೇಶನ್ ( ಎಂಎಎ) ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ ಎನ್ನಲಾಗಿದೆ.
