Breaking Newsಮನರಂಜನೆಸಿನಿಮಾಸೆಲೆಬ್ರಿಟಿ
ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಟ ಸಲ್ಮಾನ್ ಖಾನ್ ರನ್ನು ತಡೆದ ಸಿಐಎಸ್ ಎಫ್ ಅಧಿಕಾರಿ

ವಿಮಾನ ನಿಲ್ದಾಣಕ್ಕೆ ಆಗಮಿಸಿದ ಬಾಲಿವುಡ್ ನ ಸ್ಟಾರ್ ನಟ ಸಲ್ಮಾನ್ ಖಾನ್ ಅವರನ್ನು ಸಿಐಎಸ್ ಎಫ್ ಅಧಿಕಾರಿ ತಡೆದು ಅವರನ್ನು ಚೆಕಿಂಗ್ ಮಾಡಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈಐರಲ್ ಆಗಿದೆ.
ಸಲ್ಮಾನ್ ಖಾನ್ ಪ್ರಸ್ತುತ ಟೈಗರ್ 3 ಚಿತ್ರದ ಚಿತ್ರೀಕರಣದಲ್ಲಿದ್ದಾರೆ. ಹಾಗಾಗಿ ಈ ಚಿತ್ರದ ಚಿತ್ರೀಕರಣಕ್ಕಾಗಿ ವಿದೇಶಕ್ಕೆ ತೆರಳಲು ಸಲ್ಮಾನ್ ಖಾನ್ ವಿಮಾನ ನಿಲ್ದಾಣದ ಟರ್ಮಿನಲ್ ಕಡೆಗೆ ತೆರಳಿದ್ದಾರೆ. ಆಗ ಸಿಐಎಸ್ ಎಫ್ ಅಧಿಕಾರಿಯೊಬ್ಬರು ಸ್ಟಾರ್ ನಟ ಎಂಬುದನ್ನು ಲೆಕ್ಕಿಸದೆ ಅವರನ್ನು ತಡೆದು ಗುರುತಿನ ಚೀಟಿ ಮುಂತಾದ ಅಗತ್ಯ ದಾಖಲೆಗಳನ್ನು ಪರಿಶೀಲಿಸಿ ನಂತರ ಒಳಗೆ ಹೋಗಲು ಅನುಮತಿ ನೀಡಿದ್ದಾರೆ.
ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅಧಿಕಾರಿಯ ಕರ್ತವ್ಯ ನಿಷ್ಠೆಯನ್ನು ಎಲ್ಲರೂ ಮೆಚ್ಚಿ ಹೊಗಳಿದ್ದಾರೆ. ಆ ಸಂದರ್ಭದಲ್ಲಿ ಅಧಿಕಾರಿಯು ಈ ಬಗ್ಗೆ ಮಾಧ್ಯಮಗಳ ಜೊತೆ ಮಾತುಕತೆ ನಡೆಸಿದ್ದು, ಇದರಿಂದ ಫ್ರೋಟೊಕಾಲ್ ಉಲ್ಲಂಘಿಸಿದ್ದರಿಂದ ಅಧಿಕಾರಿಯ ಮೊಬೈಲ್ ಫೋನ್ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
