ಮನರಂಜನೆಸಿನಿಮಾಸೆಲೆಬ್ರಿಟಿ

ಲತಾ ಮಂಗೇಶ್ಕರ್ ಆರೋಗ್ಯದಲ್ಲಿ ಕೊಂಚ ಚೇತರಿಕೆ

ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರಿಗೆ ಕೊರೊನಾ ಪಾಸಿಟಿವ್ ಹಿನ್ನೆಲೆಯಲ್ಲಿ ಕಳೆದ 20 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಲತಾ ಆರೋಗ್ಯದ ಕುರಿತು ಸಾಕಷ್ಟು ಊಹಾಪೋಹಗಳು ಹರಿದಾಡುತ್ತಿದ್ದು ಇದೀಗ ಸ್ವತಃ ಲತಾ ಮಂಗೇಶ್ಕರ್ ವಕ್ತಾರರು ಅವರ ಆರೋಗ್ಯದ ಕುರಿತು ಮಾಹಿತಿ ನೀಡಿದ್ದಾರೆ. ಗಾಯಕಿ ಲತಾ ಮಂಗೇಶ್ಕರ್ ಅವರ ಆರೋಗ್ಯದ ಬಗ್ಗೆ ಸುದ್ದಿ ತಿಳಿದ ಅಭಿಮಾನಿಗಳು ಕೊಂಚ ಮಟ್ಟಿಗೆ ನಿರಾಳರಾಗಿದ್ದಾರೆ.

92 ವರ್ಷ ವಯಸ್ಸಿನ ಗಾಯಕಿ ಲತಾ ಮಂಗೇಶ್ಕರ್ ಅವರಿಗೆ ಜನವರಿ 8ನೇ ತಾರೀಖು ಕೊರೊನಾ ದೃಡಪಟ್ಟಿದ್ದ ಮುಂಬೈನ ಬ್ರೀಬ್ ಕ್ಯಾಂಡಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೊವಿಡ್ ಜೊತೆಗೆ ನ್ಯೂಮೋನಿಯಾ ಕೂಡ ಕಾಣಿಸಿಕೊಂಡಿದ್ದು ಅವ್ರ ಅಭಿಮಾನಿಗಳನ್ನ ಆತಂಕಕ್ಕೆ ದೂಡುವಂತೆ ಮಾಡಿದೆ. ಇದೀಗ ಲತಾ ಆರೋಗ್ಯದಲ್ಲಿ ಕೊಂಚ ಮಟ್ಟಿನ ಸುಧಾರಣೆ ಕಂಡು ಬಂದಿರೋದಾಗಿ ಲತಾ ಮಂಗೇಶ್ಕರ್ ವಕ್ತಾರರು ತಿಳಿಸಿದ್ದಾರೆ.

ಲತಾ ಮಂಗೇಶ್ಕರ್ ಅವರ ಟ್ವೀಟರ್ ಖಾತೆಯಿಂದ ಟ್ವೀಟ್ ಮಾಡಿರುವ ಅವರ ವಕ್ತಾರರು “ಗಾಯಕಿ ಲತಾ ಇನ್ನೂ ಐಸಿಯುವಿನಲ್ಲಿದ್ದಾರೆ. ಅವರ ಆರೋಗ್ಯದಲ್ಲಿ ತುಸು ಚೇತರಿಕೆ ಕಂಡು ಬಂದಿದೆ” ಎಂದು ಟ್ವೀಟ್ ಮಾಡಿದ್ದಾರೆ.

ಲತಾ ಅವರ ಆರೋಗ್ಯದ ಕುರಿತು ಹಲವರು ವದಂತಿ ಹಬ್ಬಿಸುತ್ತಿದ್ದಾರೆ. ಅದಕ್ಕೆ ಕಿವಿಗೊಡಬೇಡಿ ಎಂದು ವಕ್ತಾರರು ಇದೇ ವೇಳೆ ತಿಳಿಸಿದ್ದಾರೆ. ಕೋವಿಡ್ ಪಾಸಿಟಿವ್ ಆಗಿದ್ದ ಸಿಬ್ಬಂದಿಯೊರ್ವರಿಂದ ಲತಾ ಮಂಗೇಶ್ಕರ್ ಅವರಿಗೆ ಸೋಂಕು ತಗುಲಿದೆ ಎನ್ನಲಾಗ್ತಿದೆ. ಡಾ.ಪ್ರತಿತ್ ಸಮ್ದಾನಿ ಲತಾ ಮಂಗೇಶ್ಕರ್ ಅವರ ಆರೋಗ್ಯದ ಮೇಲ್ವಿಚಾರಣೆ ನೋಡಿಕೊಳ್ಳುತ್ತಿದ್ದು, ಲತಾ ಮಂಗೇಶ್ಕರ್ ಆದಷ್ಟು ಬೇಗ ಗುಣಮುಖರಾಗಲಿ ಎಂದು ಕೋಟ್ಯಾಂತರ ಮಂದಿ ಹಾರೈಸುತ್ತಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button