ಮನರಂಜನೆಸಿನಿಮಾಸೆಲೆಬ್ರಿಟಿ

ಫೆ. 24ರಂದು ರಿಲೀಸ್ ಆಗಲಿದೆ ವಿಕ್ರಾಂತ್ ರೋಣ

ಕನ್ನಡದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾವೂ ಒಂದು, ಎಲ್ಲವೂ ಅಂದುಕೊಂಡಂತೆ ಆಗಿದ್ದಿದ್ರೆ ಈಗಾಗ್ಲೆ ಸಿನಿಮಾ ರಿಲೀಸ್ ಆಗಬೇಕಿತ್ತು, ಆದರೆ ಕೋವಿಡ್ ನಿಂದಾಗಿ ರಿಲೀಸ್ ಡೇಟ್ ಮುಂದೂಡಿದ್ದ ಚಿತ್ರತಂಡ ಇದೀಗ ಬಿಡುಗಡೆಯ ದಿನಾಂಕವನ್ನ ಅನೌನ್ಸ್ ಮಾಡಿದೆ,

ಕಿಚ್ಚ ಸುದೀಪ್ ನಟನೆಯ ಅನೂಪ್ ಬಂಡಾರಿ ನಿರ್ದೇಶನದ ವಿಕ್ರಾಂತ್ ರೋಣ ಸಿನಿಮಾ ಯಾವಾಗ ರಿಲೀಸ್ ಆಗುತ್ತೆ ಅಂತ ಅಭಿಮಾನಿಗಳು ಕಾಯ್ತಿದ್ದಾರೆ. ಇಷ್ಟು ದಿನಗಳ ಕಾಲ ಸಿನಿಮಾಗಾಗಿ ಕಾದು ಕೂತಿದ್ದ ಅಭಿಮಾನಿಗಳಿಗೆ ಚಿತ್ರತಂಡ ಗುಡ್ ನ್ಯೂಸ್ ನೀಡಿದ್ದು ಫೆಬ್ರವರಿ 24ರಂದು ಚಿತ್ರವನ್ನ ರಿಲೀಸ್ ಮಾಡೋಕ್ಕೆ ಚಿತ್ರತಂಡ ಮುಂದಾಗಿದೆ.

ಸಿನಿಮಾ ರಿಲೀಸ್ ಗೆ ಇನ್ನೋಂದು ತಿಂಗಳು ಭಾಕಿ ಇದ್ದು ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗ್ತಿರೋದಾಗಿ ಚಿತ್ರದ ನಿರ್ಮಾಪಕ ಜಾಕ್ ಮಂಜು ಹೇಳಿದ್ದಾರೆ, ಚಿತ್ರವನ್ನ ಪ್ಯಾನ್ ಇಂಡಿಯಾ ಸಿನಿಮಾವಾಗಿ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ಮಾಡಿಕೊಳ್ತಿದೆ.

ಅಡ್ವೆಂಚರ್ ಹಾಗೂ ಆಕ್ಷನ್ ಸಿನಿಮಾಗಳಿಂದ ಕೂಡಿರುವ ವಿಕ್ರಾಂತ್ ರೋಣ ಸಿನಿಮಾ ಸದ್ಯ ಕನ್ನಡದಲ್ಲಿ ರಿಲೀಸ್ ಆಗ್ತಿರುವ ಅದ್ದೂರಿ ಬಜೆಟ್ ನ ಸಿನಿಮಾವಾಗಿದೆ. ಚಿತ್ರದಲ್ಲಿ ಸುದೀಪ್ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಳ್ತಿದ್ದು ಸುದೀಪ್ ಗೆ ಜೋಡಿಯಾಗಿ ನೀತಾ ಅಶೋಕ್ ಬಣ್ಣ ಹಚ್ಚಿದ್ದಾರೆ.

ವಿಕ್ರಾಂತ್ ರೋಣ ಸಿನಿಮಾ 3ಡಿಯಲ್ಲಿ ತೆರೆಗೆ ಬರ್ತಿದ್ದು ನೇರವಾಗಿ ಚಿತ್ರಮಂದಿರದಲ್ಲಿ ರಿಲೀಸ್ ಮಾಡೋಕೆ ಚಿತ್ರತಂಡ ಮುಂದಾಗಿದೆ, ಸಾಕಷ್ಟು ನಿರೀಕ್ಷೆ ಮೂಡಿಸಿರುವ ವಿಕ್ರಾಂತ್ ರೋಣ ಸಿನಿಮಾ ಫೆಬ್ರವರಿ 24ರಂದು ಅಭಿಮಾನಿಗಳ ಕಣ್ಮನ ತಣಿಸಲಿದೆ.

Spread the love

Related Articles

Leave a Reply

Your email address will not be published. Required fields are marked *

Back to top button