ಮನರಂಜನೆಸಿನಿಮಾಸೆಲೆಬ್ರಿಟಿ

ಇನ್ ಸ್ಟಾಗ್ರಾಂನಲ್ಲಿ ನಟಿ ಸಮಂತಾ ಹೆಚ್ಚು ಹಣ ಗಳಿಸುತ್ತಾರೆಯೇ?

‘ದಿ ಫ್ಯಾಮಿಲಿ ಮ್ಯಾನ್ 2’ ವೆಬ್ ಸರಣಿಯ ಯಶಸ್ಸಿನ ನಂತರ ಸಮಂತಾ ಜನಪ್ರಿಯತೆಯು ರಾಷ್ಟ್ರೀಯ ಮಟ್ಟದಲ್ಲಿ ಬೆಳೆದಿದೆ. ವಿವಿಧ ಭಾಷೆಗಳಲ್ಲಿ ‘ದಿ ಫ್ಯಾಮಿಲಿ ಮ್ಯಾನ್ 2’ ಬಿಡುಗಡೆಯಾದ ನಂತರ ಅವರ ಇನ್ ಸ್ಟಾಗ್ರಾಂನಲ್ಲಿ ಒಂದು ಮಿಲಿಯನ್ ಹೊಸ ಅನುಯಾಯಿಗಳು ಸೇರಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

ಈಗ ಅವರು ವಿವಿಧ ವಿಚಾರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಿದ್ದಾರೆ. ಮೊದಲಿನಂತೆ ಹೊಸ ಚಿತ್ರಗಳಿಗೆ ಸಹಿ ಹಾಕುವಾಗ ಸರಿಯಾದ ಚಿತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರಂತೆ. ಇದರಿಂದ ಅವರ ಚಿತ್ರ ಮತ್ತು ಆದಾಯದಲ್ಲಿ ಯಾವುದೇ ರೀತಿಯ ಸಮಸ್ಯೆ ಕಂಡುಬಂದಿಲ್ಲ ಎನ್ನಲಾಗಿದೆ.

ಹಾಗಾಗಿ ಅವರು ಇನ್ ಸ್ಟಾಗ್ರಾಂನಲ್ಲಿ ವಿವಿಧ ಬ್ರಾಂಡ್ ಗಳನ್ನು ಪ್ರಚಾರ ಮಾಡುವ ಮೂಲಕ ಉತ್ತಮ ಹಣ ಗಳಿಸುತ್ತಿದ್ದಾರೆ ಎಂದು ವರದಿಯಾಗಿದೆ. ಆಕೆಯ ಖಾತೆಗೆ ಈಗ ಹಲವಾರು ಹೊಸ ಬ್ರ್ಯಾಂಡ್ ಗಳನ್ನು ಸೇರಿಸಲಾಗಿದೆ. ಅವರು ಸಿನಿಮಾಗಳಿಂದ ಹಣ ಪಡೆಯುದಕ್ಕಿಂತ ಬ್ರಾಂಡ್ ಎಂಡಾರ್ಸ್ ಮೆಂಟ್ ಗಳ ಮೂಲಕ ಅವರು ಆದಾಯ ಪಡೆಯುತ್ತಿದ್ದಾರೆ ಎನ್ನಲಾಗಿದೆ

Spread the love

Related Articles

Leave a Reply

Your email address will not be published. Required fields are marked *

Back to top button