ಮನರಂಜನೆಸಿನಿಮಾ

ನಿರ್ಮಲಾನಂದನಾಥ ಶ್ರೀಗಳ ಆಶೀರ್ವಾದ ಪಡೆದ ಅಮೂಲ್ಯ,ಜಗದೀಶ್

ಸ್ಯಾಂಡಲ್ ವುಡ್ ನಟಿ ಅಮೂಲ್ಯ ಮೊದಲ ಮಗು ನಿರೀಕ್ಷೆಯಲ್ಲಿ ಇದ್ದಾರೆ. ಇತ್ತೀಚೆಗೆ ಅವರ ಸೀಮಂತ ಕಾರ್ಯ ಅದ್ದೂರಿಯಾಗಿ ನೆರೆವೇರಿತ್ತು. ಇದೀಗ ಅಮೂಲ್ಯ ಮತ್ತು ಪತಿ ಜಗದೀಶ್ ಅವರು ಇಂದು ವಿಜಯನಗರದ ಶ್ರೀ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಇಂದು ವಿಜಯನಗರದ ಶ್ರೀ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ, ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ಆಶೀರ್ವಾದ ಪಡೆಯಲಾಯಿತು. ಈ ಸಂದರ್ಭದಲ್ಲಿ ಸ್ವಾಮೀಜಿ ಅವರಿಂದ ಭಗವದ್ಗೀತೆ ಗ್ರಂಥವನ್ನು ಪಡೆದಿದ್ದು, ಮನಸ್ಸಿಗೆ ಸಂತೋಷ ನೀಡಿತು ಎಂದು ತಿಳಿಸಿದ್ದಾರೆ.

2017ರಲ್ಲಿ ಜಗದೀಶ್ ಜೊತೆ ಅಮೂಲ್ಯ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಕೆಲವು ದಿನಗಳ ಹಿಂದೆ ಅಮೂಲ್ಯ ಬೇಬಿ ಬಂಪ್ ಫೋಟೋ ಶೂಟ್ ಮಾಡಿಸಿದ್ದರು.

Spread the love

Related Articles

Leave a Reply

Your email address will not be published. Required fields are marked *

Back to top button