ಆರೋಗ್ಯ ಸುಧಾರಣೆಗೆ ಲತಾ ಮಂಗೇಶ್ಕರ್ ಮನೆಯಲ್ಲಿ ವಿಶೇಷ ಪೂಜೆ

ಖ್ಯಾತ ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಅವರಿಗೆ ಕೊರೊನಾ ಪಾಸಿಟಿವ್ ದೃಡಪಟ್ಟಿರುವ ಹಿನ್ನೆಲೆಯಲ್ಲಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 92 ವರ್ಷ ವಯಸ್ಸಿನ ಲತಾ ಮಂಗೇಶ್ಕರ್ ಅವರಿಗೆ ಕೊವಿಡ್ ಜೊತೆಗೆ ನ್ಯುಮೋನಿಯಾ ಕೂಡ ದೃಢಪಟ್ಟಿದ್ದು ಅಭಿಮಾನಿಗಳನ್ನ ಆತಂಕಕ್ಕೆ ದೂಡುವಂತೆ ಮಾಡಿದೆ.
ಲತಾ ಮಂಗೇಶ್ಕರ್ ಆರೋಗ್ಯ ಸುಧಾರಣೆಗೆ ಇಡೀ ದೇಶವೇ ಪ್ರಾರ್ಥಿಸುತ್ತಿದೆ. ಲತಾ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಲತಾ ಮಂಗೇಶ್ಕರ್ ಆರೋಗ್ಯ ಸುಧಾರಣೆಗೆ ಅವರ ಮನೆಯಲ್ಲಿ ಪೂಜೆ ಸಲ್ಲಿಸುತ್ತಿರೋದಾಗಿ ಲತಾ ಅವರ ಸಹೋದರಿ ಗಾಯಕಿ ಆಶಾ ಭೋಸ್ಲೆ ಹೇಳಿದ್ದಾರೆ.
ಆರೋಗ್ಯ ಸುಧಾರಣೆಗೆ ಲತಾ ಅವರ ಮನೆಯಲ್ಲಿ ವಿಶೇಷ ಪೂಜೆ ನಡೆಸಲಾಗುತ್ತಿದೆ. ಶಿವ ರುದ್ರರನ್ನ ಪ್ರತಿಷ್ಠಾಪನೆ ಮಾಡಿ ಪೂಜೆ ಸಲ್ಲಿಸಲಾಗುತ್ತಿದೆ ಎಂದಿದ್ದಾರೆ. ಅಲ್ಲದೆ ಅವರ ಆರೋಗ್ಯದ ಕುರಿತಾಗಿ ಯಾವುದೇ ರೀತಿಯ ಸುಳ್ಳು ಸುದ್ದಿ ಹಬ್ಬಿಸಬೇಡಿ ಎಂದು ಮನವಿ ಮಾಡಿದ್ದಾರೆ. ಕೋವಿಡ್ ಪಾಸಿಟಿವ್ ಆಗಿದ್ದ ಸಿಬ್ಬಂದಿಯೊರ್ವರಿಂದ ಲತಾ ಮಂಗೇಶ್ಕರ್ ಅವರಿಗೆ ಸೋಂಕು ತಗುಲಿದೆ ಎನ್ನಲಾಗ್ತಿದೆ.



