ಜಿಲ್ಲಾ ಸುದ್ದಿಮನರಂಜನೆಮೈಸೂರುಸಿನಿಮಾಸೆಲೆಬ್ರಿಟಿ

ನಟ ಪುನೀತ್ ರಾಜ್‍ಕುಮಾರ್ ನುಡಿನಮನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ ಶಕ್ತಿಧಾಮ ಮಕ್ಕಳು

ಮೈಸೂರು: ಇಂದು ನಟ ಪುನೀತ್ ರಾಜ್ ಕುಮಾರ್ ರವರ ನುಡಿನಮನ ಕಾರ್ಯಕ್ರಮ ಬೆಂಗಳೂರಿನಲ್ಲಿ ನಡೆಯುತ್ತಿರುವ ಹಿನ್ನೆಲೆ ಮೈಸೂರಿನ ಶಕ್ತಿಧಾಮದ ಮಕ್ಕಳು ಬೆಂಗಳೂರಿಗೆ ತೆರಳಿದ್ದಾರೆ.

ಪುನೀತ್ ರಾಜ್‍ಕುಮಾರ್ ಅವರಿಗೆ ನುಡಿನಮನ ಸಲ್ಲಿಸಲು ಇಂದು ಚಿತ್ರರಂಗ ಬೆಂಗಳೂರಿನ ಅರಮನೆ ಮೈದಾನದಲ್ಲಿ ಪುನೀತ್ ನಮನ ಕಾರ್ಯಕ್ರಮ ಹಮ್ಮಿಕೊಂಡಿದೆ.

ಶಕ್ತಿಧಾಮದ ಮಕ್ಕಳು ಮೈಸೂರಿನಿಂದ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದು, ಶಕ್ತಿಧಾಮ ಕಾರ್ಯನಿರ್ವಾಹಕಿ ಸುಮನಾ ನೇತೃತ್ವದಲ್ಲಿ  ಬಸ್ ಮೂಲಕ ಸುಮಾರು 150 ಮಕ್ಕಳು ಬೆಂಗಳೂರಿಗೆ  ತೆರಳಿದ್ದಾರೆ.

ಮಧ್ಯಾಹ್ನ ಬೆಂಗಳೂರಿನ ಅರಮನೆ ಮೈದಾನದಲ್ಲಿ ಪುನೀತ್ ನಮನ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಶಕ್ತಿಧಾಮದ ಮಕ್ಕಳು ಪ್ರಾರ್ಥನೆ ಮಾಡಲಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button