
ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಲವ್ ಮಾಕ್ಟೇಲ್ ಸಿನಿಮಾ ಮೂಲಕ ಸಖತ್ ಮೋಡಿ ಮಾಡಿದ್ದರು. ಈಗ ಸೀಕ್ವೆಲ್ ಕೂಡ ನಾಳೆ ರಾಜ್ಯಾದ್ಯಂತ ರಿಲೀಸ್ ಆಗಲಿದೆ. ಹೀಗಾಗಿ ಲವ್ ಮಾಕ್ಟೇಲ್ -2 ಸಿನಿಮಾದ ಮೇಲೆ ಭಾರಿ ನಿರೀಕ್ಷೆ ಹುಟ್ಟಹಾಕಿದೆ.
ಈಗಾಗಲೇ ಲವ್ ಮಾಕ್ಟೇಲ್ 2 ಸಿನಿಮಾದ ಪ್ರೀಮಿಯರ್ ಶೋ ಟಿಕೆಟ್ ನ್ನು ಬುಕ್ ಮೈ ಶೋ ನಲ್ಲಿ ಪ್ರೇಕ್ಷಕರಿಗಾಗಿ ಮಾರಾಟಕ್ಕಿಡಲಾಗಿದೆ. ರಾತ್ರಿ 9.30ಕ್ಕೆ ಮೈಸೂರು, ಬೆಂಗಳೂರು ನಗರಗಳಲ್ಲಿ ಆಯ್ದ ಚಿತ್ರಮಂದಿರಗಳಲ್ಲಿ ಪ್ರೀಮಿಯರ್ ಶೋ ಹಮ್ಮಿಕೊಳ್ಳಲಾಗಿದೆ. ಈಗಾಗಲೇ ಬಹುತೇಕ ಟಿಕೆಟ್ ಗಳು ಸೋಲ್ಡ್ ಔಟ್ ಆಗಿದೆ.
ಅಂದಹಾಗೆ ಲವ್ ಮಾಕ್ಟೇಲ್ ಸಿನಿಮಾ ರಿಲೀಸ್ ಆಗಿ ಪ್ರೇಕ್ಷಕರ ಮೆಚ್ಚುಗೆ ಗಳಿಸಿದ್ದಲ್ಲದೇ, ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಧೂಳೆಬ್ಬಿಸಿತ್ತು. ಇದೀಗ ಈ ಸಿನಿಮಾ ಮೂಲಕ ಮತ್ತೆ ಬಾಕ್ಸ್ ಆಫೀಸ್ ನಲ್ಲಿ ಕಮಾಲ್ ಮಾಡಲಿದೆಯಾ? ಎಂಬುದನ್ನು ಕಾದು ನೋಡಬೇಕಿದೆ.





One Comment