
ಉಡುಪಿ: ಭಾರತೀಯ ಚಿತ್ರರಂಗವೇ ತಿರುಗಿ ನೋಡುವಂತೆ ಮಾಡಿದ ಕೆಜಿಎಫ್ ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ.ಅದಕ್ಕೂ ಮುನ್ನ ರಾಕಿಂಗ್ ಸ್ಟಾರ್ ಯಶ್ ಟೆಂಪಲ್ ರನ್ ನಡೆಸಿದ್ದಾರೆ. ಈಗಾಗಲೇ ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದರು. ಇದೀಗ ನಟ ಯಶ್ ಇಂದು ಉಡುಪಿಯ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದಿದ್ದಾರೆ.
ನಟ ಯಶ್ ಜೊತೆಗೆ ನಿರ್ಮಾಪಕ ವಿಜಯ್ ಕಿರಗಂದೂರು ಸಹ ಕನಕನ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಪಡೆದಿದ್ದಾರೆ. ನಂತರ ಕೊಲ್ಲೂರು ಕುಂಬಾಶಿ ದೇವಸ್ಥಾನಗಳಿಗೆ ಭೇಟಿ ನೀಡಲಿದ್ದಾರೆ. ಈ ವೇಳೆ ದೇಗುಲದಲ್ಲಿ ರಾಕಿ ಬಾಯ್ ಜೊತೆ ಸೆಲ್ಫಿಗಾಗಿ ಅಭಿಮಾನಿಗಳು ಮುಗಿಬಿದಿದ್ದರು.
ಇನ್ನು ಕೆಜಿಎಫ್ -2 ಸಿನಿಮಾ ಏಪ್ರಿಲ್ 14ಕ್ಕೆ ವಿಶ್ವದಾದ್ಯಂತ ಏಕಕಾಲದಲ್ಲಿ 5 ಭಾಷೆಗಳಲ್ಲಿ ತೆರೆ ಕಾಣಲಿದೆ. ಈ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂದೂರು ನಿರ್ಮಿಸಿದ್ದಾರೆ. ಈ ಹಿಂದೆ ಕಳೆದ ವರ್ಷ ಕೆಜಿಎಫ್ -2 ಸಿನಿಮಾ ರಿಲೀಸ್ ಮಾಡಲು ಪ್ಲಾನ್ ಮಾಡಲಾಗಿತ್ತು. ಆದರೆ ಕೊರೊನಾದಿಂದ ಈ ಸಿನಿಮಾ ಮಾಡಲಾಗಿತ್ತು.




