Breaking NewsLatestಮೆಟ್ರೋರಾಜಕೀಯರಾಜ್ಯರಾಷ್ಟ್ರೀಯಸುದ್ದಿ

ಶತಾಯಗತಾಯ ಈ ಬಾರಿ ಗೋವಾದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ: ರಾಹುಲ್ ಗಾಂಧಿ

ಪಣಜಿ: ಗೋವಾ ವಿಧಾನಸಭೆ ಚುನಾವಣೆಯನ್ನು ಗೆಲ್ಲುವ ವಿಶ್ವಾಸವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವ್ಯಕ್ತಪಡಿಸಿದ್ಧಾರೆ. ಗೋವಾದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಲಿದೆ. ಚುನಾವಣೆ ಫಲಿತಾಂಶ ಘೋಷಿಸಿದ ಸರ್ಕಾರ ರಚಿಸಲು ಪಕ್ಷ ಕೂಡಲೇ ಕಾರ್ಯಪ್ರವೃತ್ತವಾಗುತ್ತದೆ ಎಂದು ಹೇಳಿದ್ದಾರೆ.  

ಮಾರ್ಗೋವಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಡಳಿತರೂಢ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. 2017ರಲ್ಲಿ ಗೋವಾ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜನಾದೇಶವನ್ನು ಕದ್ದು ಬಿಜೆಪಿ ಸರ್ಕಾರ ರಚಿಸಿತು ಎಂದು ಕಿಡಿಕಾರಿದರು.

ಐದು ವರ್ಷಗಳ ಹಿಂದೆ ಗೋವಾ ಕಾಂಗ್ರೆಸ್ ಸರ್ಕಾರವನ್ನು ಆಯ್ಕೆ ಮಾಡಿತ್ತು. ಬಿಜೆಪಿ ಭ್ರಷ್ಟಾಚಾರ ಮತ್ತು ಹಣಬಲದ ಮೂಲಕ ಗೋವಾದ ಜನತೆ ನೀಡಿದ್ದ ಜನಾದೇಶವನ್ನು ಕದಿಯಿತು ಎಂದೂ ಅವರು ಹೇಳಿದರು.

2017ರಲ್ಲಿ ಗೋವಾ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 17, ಬಿಜೆಪಿ 13 ಸ್ಥಾನಗಳನ್ನು ಗೆದ್ದಿತ್ತು. ಕೇಸರಿ ಪಕ್ಷ ಎಂಜಿಪಿ, ಜಿಎಫ್ ಪಿ ಜತೆ ಮೈತ್ರಿ ಮಾಡಿಕೊಳ್ಳುವ ಮೂಲಕ ಕಾಂಗ್ರೆಸ್ ಸರ್ಕಾರ ರಚಿಸಲು ಸಾಧ್ಯವಾಗಿರಲಿಲ್ಲ.

ಚುನಾವಣೆ ಫಲಿತಾಂಶ ಪ್ರಕಟವಾದ 12 ಗಂಟೆಯೊಳಗೆ ಬಿಜೆಪಿಯ ಅಂದಿನ ಅಧ್ಯಕ್ಷ ಅಮಿತ್ ಶಾ ಹಾಗೂ ಅಂದಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ ಕರೆ ಮೇರೆಗೆ ಬಿಜೆಪಿ ತಂತ್ರಗಾರಿಕೆ ಮಾಡಿ ಸರ್ಕಾರ ರಚಿಸುವಲ್ಲಿ ಸಫಲವಾಗಿತ್ತು. ಆದರೆ ಸರ್ಕಾರ ರಚಿಸುವ ವಿಷಯದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ತಂತ್ರಗಾರಿಕೆ ರೂಪಿಸುವ ವಿಷಯದಲ್ಲಿ ವಿಫಲವಾಗಿದ್ದರು.

Spread the love

Related Articles

Leave a Reply

Your email address will not be published. Required fields are marked *

Back to top button