
ಮುಂಬೈ: 20 ಅಂತಸ್ತಿನ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಈ ದುರಂತದಲ್ಲಿ 7 ಮಂದಿ ಮೃತಪಟ್ಟಿದ್ದು, 15 ಜನರಿಗೆ ಗಾಯವಾಗಿದೆ. ಭಾಟಿಯಾ ಆಸ್ಪತ್ರೆ ಸಮೀಪ ಇರುವ 20 ಮಹಡಿಯ ಕಮಲಾ ಬಿಲ್ಡಿಂಗ್ ನಲ್ಲಿ ಈ ಅಗ್ನಿ ದುರಂತ ಸಂಭವಿಸಿದೆ.
ಇನ್ನು ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿ 13 ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳದಲ್ಲಿ ಐದು ಌಂಬುಲ್ನ್ಸ ಗಳಿದ್ದು, ಜನರನ್ನು ಆಸ್ಪತ್ರೆಗೆ ರವಾನಿಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಕಟ್ಟಡದ 18ನೇ ಅಂತಸ್ತಿನಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ನಿವಾಸಿಗಳಿ ಆತಂಕ ಭೀತಿ ಎದುರಾಗಿದೆ. ಈ ದಟ್ಟವಾದ ಹೊಗೆಯಿಂದಾಗಿ ಆರು ಮಂದಿ ವೃದ್ಧರಿಗೆ ತೊಂದರೆಯಾಗಿದ್ದು, ಆಕ್ಸಿಜನ್ ನೀಡಲಾಗುತ್ತಿದೆ ವರದಿಯಲ್ಲಿ ತಿಳಿಸಿದೆ.
ಇನ್ನು ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ



