
ಲಖನೌ: ಕೇಂದ್ರ ಸಚಿವ ಪಂಕಜ್ ಚೌಧರಿ ಪುತ್ರನಿದ್ದ ಕಾರು ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ರೋಹನ್ ಚೌಧರಿ ಪ್ರಯಾಣಿಸುತ್ತಿದ್ದ ಕಾರು, ಉತ್ತರ ಪ್ರದೇಶದ ಮಹಾರಾಜ್ ಗಂಜ್ ಜಿಲ್ಲೆಯ ಪರ್ತವಾಲ್- ಕಪ್ತಂಗಂಜ್ ರಸ್ತೆಯಲ್ಲಿ ಕಬ್ಬು ತುಂಬಿದ ಗಾಡಿಗೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ ರೋಹನ್ ಗೆ ಸ್ವಲ್ಪ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.
ಇನ್ನು ರಾತ್ರಿ ಬಿಹಾರದಿಂದ ರೋಹನ್ ಅವರು ಖಾಸಗಿ ವಾಹನದಲ್ಲಿ ಮಹಾರಾಜ್ ಗಂಜ್ ನಿವಾಸಕ್ಕೆ ಆಗಮಿಸುತ್ತಿದ್ದರು. ಈ ವೇಳೆ ದಟ್ಟ ಮಂಜು ಆವರಿಸಿದ್ದರಿಂದ ಅಪಘಾತ ಸಂಭವಿಸಿದೆ.



