Latestಕಲಬುರ್ಗಿಜಿಲ್ಲಾ ಸುದ್ದಿ

ಸಿಮೆಂಟ್ ಕಾರ್ಖಾನೆಯಲ್ಲಿ ಕ್ಲಿಂಕರ್ ಬೆಲ್ಟ್ ಗೆ ಆಕಸ್ಮಿಕ ಬೆಂಕಿ

ಕಲಬುರಗಿ: ಸಿಮೆಂಟ್ ಕ್ಲಿಂಕರ್ ಸಾಗಿಸುವ ಬೆಲ್ಟ್ ಗೆ ಆಕಸ್ಮಿಕ ಬೆಂಕಿ ತಗುಲಿ ಆತಂಕ ಸೃಷ್ಟಿಯಾದ ಘಟನೆ ಚಿತ್ತಾಪುರ ತಾಲೂಕಿನ ವಾಡಿ ಎಸಿಸಿ ಸಿಮೆಂಟ್ ಕಾರ್ಖಾನೆಯಲ್ಲಿ ನಡೆದಿದೆ‌..

ಕಲ್ಲು, ಮಾಗ್ಸಿನ್ ಮಣ್ಣು, ಜಿಪ್ಸಂ, ಕಲ್ಲಿದ್ದಲು ಸಾಗಿಸುವ ಕ್ಲಿಂಕರ್ ಬೆಲ್ಟ್ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ‌. ಬೆಂಕಿಯಿಂದಾಗಿ ಭಯಂಕರವಾದ ದಟ್ಟ ಹೊಗೆ ತುಂಬಿತ್ತು. ವಾಡಿ ಪಟ್ಟಣ ಸೇರಿ ಸುತ್ತಲಿನ ಗ್ರಾಮಸ್ಥರು ಆತಂಕಗೊಂಡಿದ್ದಾರೆ‌.ಅವಘಡದಿಂದ ಗಾಬರಿಗೊಂಡ ಎಸಿಸಿ ಆಡಳಿತ ಮಂಡಳಿ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ಕೈಗೊಂಡಿದ್ದಾರೆ.

ಸದ್ಯ ಅಗ್ನಿಶಾಮಕ ದಳದಿಂದ ಬೆಂಕಿನಂದಿಸುವ ಕಾರ್ಯ ಮುಂದುವರೆಸಿದ್ದಾರೆ.ಅದೃಷ್ಟವಶಾತ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ. ವಾಡಿ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button