Latestಜಿಲ್ಲಾ ಸುದ್ದಿದಾವಣಗೆರೆ

ಮದ್ಯ ಕುಡಿಸಿ ಮಹಿಳೆ ಮೇಲೆ ಅತ್ಯಾಚಾರ : ಓರ್ವ ಆರೋಪಿ ಬಂಧನ, ಮತ್ತೊಬ್ಬ ಪರಾರಿ

ದಾವಣಗೆರೆ : ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ದಾವಣಗೆರೆ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಕಾಮುಕ ಪರಾರಿಯಾಗಿದ್ದು, ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ತಾಲೂಕಿನ ಹಳ್ಳಿಯೊಂದರ ಮಹಿಳೆಯನ್ನು ಬಲವಂತವಾಗಿ ಎಳೆದೊಯ್ದು ಅತ್ಯಾಚಾರ ಮಾಡಿದ್ದಾರೆ. ಪತಿ ಕೆಲಸಕ್ಕೆ ಹೋದ ವೇಳೆ ಮಹಿಳೆ ಒಬ್ಬರೇ ಇದ್ದರು. ಈ ಸಂದರ್ಭದಲ್ಲಿ ಅದೇ ಗ್ರಾಮದ ಪ್ರಭು ಮತ್ತು ಆತನ ಗೆಳೆಯ ದಾವಣಗೆರೆ ಕಿರಣ್ ಎಂಬಾತ ಮಹಿಳೆಯನ್ನು ಎಳೆದುಕೊಂಡು ಹೋಗಿದ್ದಾರೆ. ಬಳಿಕ ಆಕೆಗೆ ಮದ್ಯ ಕುಡಿಸಿ ಬಲಾತ್ಕಾರ ಮಾಡಿದ್ದಾರೆ.

ಮನೆಗೆ ಮಹಿಳೆ ಬಾರದ ಹಿನ್ನೆಲೆಯಲ್ಲಿ ಎಲ್ಲೆಡೆ ಹುಡುಕಾಟ ನಡೆಸಲಾಗಿದೆ. ಈ ವೇಳೆ ಹೊಲದಲ್ಲಿ ಅರೆಪ್ರಜ್ಞಾವಸ್ಥೆಯಲ್ಲಿ ಮಹಿಳೆ ಪತ್ತೆಯಾಗಿದ್ದು, ದಾವಣಗೆರೆ ಚಿಗಟೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಮಹಿಳೆಯು ಸ್ವಲ್ಪ ಬುದ್ದಿಮಾಂದ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button