Latestಜಿಲ್ಲಾ ಸುದ್ದಿಹುಬ್ಬಳ್ಳಿ - ಧಾರವಾಡ

ಧಾರವಾಡದ ಎಸ್​​ಡಿಎಂ ಕಾಲೇಜಿನಲ್ಲಿ ಸೋಂಕು ನಿಯಂತ್ರಣಕ್ಕೆ ಮತ್ತಷ್ಟು ಬಿಗ ಕ್ರಮ: ಡಿಸಿ ನಿತೇಶ್ ಕೆ ಪಾಟೀಲ

ಧಾರವಾಡ: ಎಸ್ ಡಿ ಎಂ ಆಸ್ಪತ್ರೆಯಲ್ಲಿ ಹರಡಿರುವ ಕೋವಿಡ್ ಸೋಂಕನ್ನು, ಆ ವಲಯದಲ್ಲಿಯೇ ನಿಯಂತ್ರಿಸಲು ಕಂಟೇನ್‌ಮೆಂಟ್ ವಲಯದಲ್ಲಿ ಇನ್ನಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಜೊತೆಗೆ ಎರಡನೇ ಡೋಸ್ ಲಸಿಕಾ ಕಾರ್ಯ ಚುರುಕುಗೊಳಿಸಲಾಗುತ್ತಿದೆ. ಜಿಲ್ಲೆಯ ಜನತೆ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ ಹೇಳಿದರು.

ಮುಖ್ಯಮಂತ್ರಿಗಳ ವಿಡಿಯೋ ಸಂವಾದ ಸಭೆಯಲ್ಲಿ ಭಾಗವಹಿಸಿದ ಬಳಿಕ ಅವರು ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಮುಖ್ಯಮಂತ್ರಿಯವರು ಇಂದು ಧಾರವಾಡ, ದಕ್ಷಿಣ ಕನ್ನಡ, ಮೈಸೂರು, ಚಾಮರಾಜನಗರ, ಕೊಡಗು ಮತ್ತಿತರ ಏಳು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ಸಭೆ ನಡೆಸಿ, ಕೋವಿಡ್ ನಿಯಂತ್ರಣ ಹಾಗೂ ಲಸಿಕಾಕರಣ ಹೆಚ್ಚಳಕ್ಕೆ ಹಲವು ಸೂಚನೆಗಳನ್ನು ನೀಡಿದ್ದಾರೆ. ಸತ್ತೂರಿನ ಎಸ್ ಡಿ ಎಂ ವೈದ್ಯಕೀಯ ಕಾಲೇಜಿನಲ್ಲಿ ಹರಡಿರುವ ಸೋಂಕು ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಮುಖ್ಯಮಂತ್ರಿಗಳಿಗೆ ವಿವರಣೆ ನೀಡಲಾಗಿದೆ ಎಂದರು.

SDM ಆಸ್ಪತ್ರೆಯಲ್ಲಿ ಓಪಿಡಿ ಸ್ಥಗಿತ, ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ಮುದುವರಿಕೆ.

ಈಗಾಗಲೇ ಎಸ್ ಡಿ ಎಮ್‌ನಲ್ಲಿ ಸೋಂಕಿತರ ಸಂಖ್ಯೆ ( ನ.27 ರ ಸಂಜೆವರೆಗೆ) 281 ಆಗಿದ್ದು, ಮತ್ತಷ್ಟು ಜನರ ವರದಿ ಬರಬೇಕಾಗಿದೆ. ಹಾಗಾಗಿ ಸಾರ್ವಜನಿಕರ ಆರೋಗ್ಯ ದೃಷ್ಠಿಯಿಂದ ಎಸ್ ಡಿ ಎಂ ಆಸ್ಪತ್ರೆಯ ಹೊರರೋಗಿಗಳ ವಿಭಾಗದ ಸೇವೆಗಳ ಸ್ಥಗಿತತೆ, ಸಾರ್ವಜನಿಕರ ಪ್ರವೇಶ ನಿರ್ಬಂಧ ಮುಂದುವರೆಸಲಾಗುವುದು ಎಂದರು.

ಮದುವೆ-ಸಾಂಸ್ಕ್ರತಿಕ ಕಾರ್ಯಕ್ರಮ ಕೈ ಬಿಡಲು ಮನವಿ.

ಜಿಲ್ಲೆಯಲ್ಲಿ ಮದುವೆ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಾಧ್ಯವಾದಷ್ಟು ಕೈಬಿಡಲು ಸಾರ್ವಜನಿಕರಿಗೆ ಸಲಹೆ ನೀಡಲಾಗುದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೊರಡಿಸುವ ಹೊಸ ಮಾರ್ಗಸೂಚಿಗಳು, ನಿರ್ದೇಶನಗಳನ್ನು ಜಾರಿಗೊಳಿಸಲಾಗುವುದು‌. ಕೋವಿಡ್ ನಿರೋಧಕ ಲಸಿಕೆಯ ಎರಡನೇ ಡೋಸ್ ಬಾಕಿ ಇರುವವರಿಗೆ ಎಸ್ ಎಂ ಎಸ್ ಮೂಲಕ ಮಾಹಿತಿ ನೀಡಿ, ಲಸಿಕೆ ಪಡೆಯಲು ಸೂಚಿಸಲಾಗುತ್ತಿದೆ ಎಂದು ತಿಳಿಸಿದರು.

Spread the love

Related Articles

Leave a Reply

Your email address will not be published. Required fields are marked *

Back to top button