Latestಮನರಂಜನೆಸಿನಿಮಾಸೆಲೆಬ್ರಿಟಿ

ಇಂದು ಅರಮನೆ ಮೈದಾನದಲ್ಲಿ ನಟ ಪುನೀತ್ ನುಡಿ​​ ನಮನ ಕಾರ್ಯಕ್ರಮ: ಬೆಂಗಳೂರಿನತ್ತ ಸಿನಿ ಗಣ್ಯರ ದಂಡು

ಬೆಂಗಳೂರು: ಇತ್ತೀಚೆಗೆ ನಿಧನರಾದ ಸ್ಯಾಂಡಲ್​​ವುಡ್ ನಟ, ಪವರ್​​ ಸ್ಟಾರ್​ ಪುನೀತ್​ ರಾಜಕುಮಾರ್​​ ಅವರಿಗೆ ಚಿತ್ರರಂಗದ ಪರವಾಗಿ ಇಂದು ನುಡಿನಮನ ಕಾರ್ಯಕ್ರಮವನ್ನ ಆಯೋಜಿಸಲಾಗಿದೆ.

ಕನ್ನಡ ಚಲಚಿತ್ರ ವಾಣಿಜ್ಯಮಂಡಳಿ ವತಿಯಿಂದ ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ಚಿತ್ರೋದ್ಯಮದ ಗಣ್ಯರು, ರಾಜಕೀಯ ನಾಯಕರು ಪಾಲ್ಗೊಳ್ಳಲಿದ್ದಾರೆ ಮಧ್ಯಾಹ್ನ ಮೂರು ಗಂಟೆಗೆ ಅರಮನೆ ಮೈದಾನದಲ್ಲಿ ಕಾರ್ಯಕ್ರಮ ಆರಂಭವಾಗಲಿದೆ.

ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಸಂಪುಟ ಸಚಿವರೆಲ್ಲರೂ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಡಾ.ರಾಜ್ ಕುಟುಂಬದಿಂದ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ಪುನೀತ್​ ರಾಜಕುಮಾರ ಪತ್ನಿ ಅಶ್ವಿನಿ, ವಿನಯ್​ ರಾಜಕುಮಾರ್​, ಯುವ ರಾಜಕುಮಾರ್ ಮತ್ತು ಕುಟುಂಬಸ್ಥರು ಭಾಗಿಯಾಗುತ್ತಾರೆ. ಪಾಸ್​​ ಇರುವವರಿಗೆ ಮಾತ್ರ ಕಾರ್ಯಕ್ರಮದಲ್ಲಿ ಭಾಗವಹಿಸಲು ಅನುಮತಿ ನೀಡಲಾಗಿದೆ.

ಸ್ಯಾಂಡಲ್ ವುಡ್ ನಟರಾದ ಕಿಚ್ಚ ಸುದೀಪ್, ಉಪೇಂದ್ರ, ಯಶ್, ರವಿಚಂದ್ರನ್, ಶ್ರೀಮುರಳಿ, ಧ್ರುವ ಸರ್ಜಾ, ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ, ಗಣೇಶ್ ಹಾಗೂ ಪುನೀತ್ ಜೊತೆ ನಟಿಸಿದ ನಟಿಯರು, ಇತರ ಕಲಾವಿದರು ಆಗಮಿಸಲಿದ್ದಾರೆ.

ಸೂಪರ್ ಸ್ಟಾರ್ ರಜನೀಕಾಂತ್, ಧನುಷ್, ವಿಶಾಲ್​​​, ವಿಜಯ್, ಅಜಿತ್, ವಿಜಯ್ ಸೇತುಪತಿ, ಸೂರ್ಯ, ಅಲ್ಲು ಅರ್ಜುನ್, ಜ್ಯೂ.ಎನ್ ಟಿಆರ್, ರಾಮ್ ಚರಣ್ ತೇಜ್, ಚಿರಂಜೀವಿ, ಪ್ರಭಾಸ್, ಮಲಯಾಳಂ ನಟ ಮೋಹನ್ ಲಾಲ್, ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಕಾರ್ಯಕ್ರಮಕ್ಕೆ ಆಗಮಿಸುವ ನಿರೀಕ್ಷೆಯಿದೆ.

ಕಾರ್ಯಕ್ರಮದಲ್ಲಿ ನಾಗೇಂದ್ರ ಪ್ರಸಾದ್ ಬರೆದಿರುವ ಹಾಡಿನ ಮೂಲಕ ಪುನೀತ್​ಗೆ ನಮನ ಸಲ್ಲಿಸಲಾಗುತ್ತದೆ. ಗುರುಕಿರಣ್ ಹಾಡಿಗೆ ರಾಜೇಶ್ ಕೃಷ್ಣನ್ ಅವರಿಂದ ಗೀತ ನಮನ ನಡೆಯಲಿದೆ. ಮಧ್ಯಾಹ್ಯ 3 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕಾರ್ಯಕ್ರಮ ನಡೆಯಲಿದೆ. ಸಂಗೀತ ಸಂಯೋಜನೆ ಮಾಡಿದ್ದು, ಈ ಗೀತೆಯ ಮೂಲಕ ಕಾರ್ಯಕ್ರಮ ಆರಂಭ ಆಗಲಿದೆ. ವಿಜಯ್ ಪ್ರಕಾಶ್, ಗುರುಕಿರಣ್ ಹಾಗೂ

Spread the love

Related Articles

Leave a Reply

Your email address will not be published. Required fields are marked *

Back to top button