Breaking NewsLatestಬೆಳಗಾವಿರಾಜಕೀಯರಾಜ್ಯ

ಎಂಇಎಸ್ ನಿಷೇಧ; ಸಿಎಂ ಜತೆ ಚರ್ಚೆ: ಆರಗ ಜ್ಞಾನೇಂದ್ರ

ಬೆಳಗಾವಿ: ರಾಜ್ಯದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ನಿಷೇಧಿಸುವ ಸಂಬಂಧ ಮುಖ್ಯವಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜತೆ ಚರ್ಚಿಸಿದ ನಂತರ ತೀರ್ಮಾನಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಸೋಮವಾರ ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡಪರ ಸಂಘಟನೆಗಳು ಶಾಂತಿಯುತವಾಗಿ ಪ್ರತಿಭಟನೆ ನಡೆಸಲಿ. ಪ್ರತಿಭಟನೆ ಎಲ್ಲರ ಹಕ್ಕು ಎಂದರು.
ಬೆಳಗಾವಿ ಶಾಂತವಾಗಿದೆ ಎಂದು ಹೇಳಿದ ಆರಗ ಜ್ಞಾನೇಂದ್ರ, ಇಲ್ಲಿ ಕನ್ನಡಿಗರು ಮತ್ತು ಮರಾಠಿಗರು ಸೌಹಾರ್ದಯುತವಾಗಿದ್ದಾರೆ ಎಂದು ಹೇಳಿದರು.

Spread the love

Related Articles

Leave a Reply

Your email address will not be published. Required fields are marked *

Back to top button