
ಪುನೀತ್ ರಾಜ್ ಕುಮಾರ್ ಅವರನ್ನು ಕಳೆದುಕೊಂಡು ನೋವಿನಲ್ಲಿರುವ ಅಶ್ವಿನಿ ರಾಜ್ ಕುಮಾರ್ ಗೆ ಮತ್ತೆ ಆಘಾತ ಎದುರಾಗಿದೆ. ಇಂದು ಅಶ್ವಿನಿ ಅವರ ತಂದೆ ರೇವನಾಥ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು. 20 ವರ್ಷಗಳ ಹಿಂದೆ ಅವರಿಗೆ ಆ್ಯಂಜಿಯೋಪ್ಲಾಸ್ಟಿ ಮಾಡಲಾಗಿತ್ತು.
ರೇವನಾಥ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಇಂಜಿನಿಯರ್ ಆಗಿ ಸೇವೆ ಸಲ್ಲಿಸಿದ್ದರು.ಪುನೀತ್ ರಾಜ್ಕುಮಾರ್ ನಿಧನದ ನಂತರ ಅವರು ತೀವ್ರ ಒತ್ತಡಕ್ಕೆ ಒಳಗಾಗಿದ್ದರು ಎನ್ನಲಾಗಿದೆ. ಇಂದು ಅವರಿಗೆ ಅನಾರೋಗ್ಯದ ಸಮಸ್ಯೆ ಕಾಣಿಸಿಕೊಂಡಿದೆ.
ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ. ಕಳೆದ 3 ತಿಂಗಳ ಹಿಂದೆ ಪುನೀತ್ ರಾಜ್ ಕುಮಾರ್ ಹೃದಯಾಘಾತದಿಂದ ನಿಧನಹೊಂದಿ, ಅಶ್ವಿನಿ ತೀವ್ರ ಆಘಾತ ಉಂಟು ಮಾಡಿತ್ತು. ಆ ನೋವು ಮಾಸುವ ಮುನ್ನವೇ ಮತ್ತೊಂದು ಶಾಕ್ ಎದುರಾಗಿದೆ.



