Latestರಾಷ್ಟ್ರೀಯವಿದೇಶಸುದ್ದಿ

ಯುದ್ಧ ಬೇಡ: ಪುಟೀನ್ ಮನವೊಲಿಸಲು ಕುಲೆಬಾ ಮನವಿ

ಕೀವ್: ರಷ್ಯಾ ಹಾಗೂ ಉಕ್ರೇನ್ ನಡುವಿನ ಸಂಘರ್ಷ 11ನೇ ದಿನಕ್ಕೆ ಕಾಲಿಟ್ಟಿದ್ದು ಅಮಾಯಕ ಜೀವಗಳು ಉಸಿರು ಚೆಲ್ಲುತ್ತಿವೆ. ದೊಡ್ಡ ದೊಡ್ಡ ಕಟ್ಟಡಗಳು, ವಿಶ್ವವಿದ್ಯಾನಿಲಯಗಳು ಸೇರಿದಂತೆ ಪ್ರತಿಯೊಂದು ಸ್ಥಳವೂ ಸುಟ್ಟು ಭಸ್ಮವಾಗುತ್ತಿದೆ. ಈ ಮಧ್ಯೆ ಯುದ್ಧ ಸಾಕು ಎಂದು ವಿಶ್ವದ ಹಲವು ರಾಷ್ಟ್ರಗಳು ಒತ್ತಾಯಿಸುತ್ತಿವೆ.

ಇದೀಗ ಉಕ್ರೇನ್​ನ ವಿದೇಶಾಂಗ ಸಚಿವ ಡಿಮಿಟ್ರೋ ಕುಲೆಬಾ ಕೂಡ ಯುದ್ಧ ಬೇಡ ಎಂಬುದನ್ನು ರಷ್ಯಾ ಅಧ್ಯಕ್ಷ ಪುಟಿನ್​ಗೆ ಅರ್ಥ ಮಾಡಿಸುವಂತೆ ಮನವಿ ಮಾಡಿದ್ದಾರೆ. ರಷ್ಯಾ, ಉಕ್ರೇನ್ ಯುದ್ಧ ನಿಲ್ಲಿಸಿ ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡುವವರ ಸಂಖ್ಯೆಯೂ ಹೆಚ್ಚಿದ್ದು, ಸದ್ಯ ಯುದ್ಧ ನಿಲ್ಲಿಸುವುದು ಪುಟಿನ್ ಕೈಯಲ್ಲಿಯೇ ಇದೆ.

ರಷ್ಯಾ ಅಧ್ಯಕ್ಷನೊಂದಿಗೆ ಉತ್ತಮ ಸಂಬಂಧ ಹೊಂದಿರುವ ಭಾರತ, ಚೀನಾ, ನೈಜೀರಿಯಾ ಸೇರಿ ಇನ್ನಿತರ ರಾಷ್ಟ್ರಗಳಿಗೆ ಯುದ್ಧ ನಿಲ್ಲಿಸಲು ಸಹಾಯ ಮಾಡುವಂತೆಯೂ ಉಕ್ರೇನ್ ಕೇಳಿಕೊಂಡಿದೆ.

ರಷ್ಯಾ ದೇಶ ಯುದ್ಧದ ನಿಯಮ ಉಲ್ಲಂಘಿಸುತ್ತಿದೆ. ಕದನ ವಿರಾಮವನ್ನೂ ಉಲ್ಲಂಘನೆ ಮಾಡಿದೆ ಎಂದು ಆರೋಪಿಸಿದ್ದಾರೆ. ಅಲ್ಲದೆ ಉಕ್ರೇನ್ನಲ್ಲಿರುವ ಇತರ ದೇಶಗಳ ನಾಗರಿಕರು ಹಾಗೂ ನಮ್ಮ ನಾಗರಿಕರನ್ನು ಇಲ್ಲಿಂದ ಸ್ಥಳಾಂತರಿಸಲು ಅವಕಾಶ ಕೊಡಿ ಎಂದು ಕುಲೆಬಾ ಮನವಿ ಮಾಡಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button