Latestಉತ್ತರ ಕನ್ನಡಜಿಲ್ಲಾ ಸುದ್ದಿ

ಟೋಲ್ ಸಿಬ್ಬಂದಿ ಮೇಲೆ ಹಲ್ಲೆ: ದೂರು ದಾಖಲಿಸದ ಪೊಲೀಸರು!

ಕಾರವಾರ : ಹಣ ಕಟ್ಟಲು ತಕರಾರು ತೆಗೆದು ಟೋಲ್ ಸಿಬ್ಬಂದಿಗೆ ಬೆಂಗಳೂರಿನ ಪೊಲೀಸರು ಹಲ್ಲೆ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಟ್ಟಿಕೇರಿ ಟೋಲ್ ಗೇಟ್ ನಲ್ಲಿ ರವಿವಾರ ನಡೆದಿದೆ. ಬೆಂಗಳೂರಿನಿಂದ ಗೋವಾಕ್ಕೆ ಕುಟುಂಬದೊಂದಿಗೆ ಆಗಮಿಸಿದ್ದ ಬೆಂಗಳೂರು ಪೊಲೀಸರ ಕುಟುಂಬ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಟ್ಟಿಕೇರಿ ಟೋಲ್ ಗೇಟ್ ನಲ್ಲಿ ಹಣ ಕಟ್ಟದೇ ತಕರಾರು ತೆಗೆದಿದ್ದರು.

ಆಲ್ಲದೇ ಖಾಸಗಿ ವಾಹನಕ್ಕೆ ಪೊಲೀಸ್ ಎಂದು ಸ್ಟಿಕರ್ ಸಹ ಅಂಟಿಸಿದ್ದರು.ಖಾಸಗಿ ವಾಹನವಾದ್ದರಿಂದ ಟೋಲ್ ಸಿಬ್ಬಂದಿ ತಡೆದಿದ್ದಾರೆ.ಟೋಲ್ ಕಟ್ಟುವಂತೆ ಕೇಳಿದ್ದಾರೆ.ಆದರೆ ಇದಕ್ಕೆ ತಕರಾರು ತೆಗೆದು ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ.ಈ ಘಟನೆ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಹಲ್ಲೆ ಸಂಬಂಧ ಟೋಲ್ ಸಿಬ್ಬಂದಿ ಅಂಕೋಲಾ ಠಾಣೆಯಲ್ಲಿ ದೂರು ನೀಡಿದ್ದರು. ನಂತರ ಅಂಕೋಲಾ ಪೊಲೀಸರ ಮಧ್ಯಸ್ಥಿಕೆಯಿಂದ ಪ್ರಕರಣ ಸುಖಾಂತ್ಯ ಕಂಡಿದೆ. ಘಟನೆ ಸಂಬಂಧ ಈವರೆಗೆ ಯಾವುದೇ ದೂರು ದಾಖಲಾಗಿಲ್ಲ.

Spread the love

Related Articles

Leave a Reply

Your email address will not be published. Required fields are marked *

Back to top button