ಶ್ರೀನಗರದಲ್ಲಿ ಉಗ್ರರ ಅಟ್ಟಹಾಸ: ಸರಪಂಚನನ್ನು ಗುಂಡಿಕ್ಕಿ ಕೊಂದ್ರು!

ಶ್ರೀನಗರ: ಜಮ್ಮು ಕಾಶ್ಮೀರದ ಗೋಷ್ಬಗ್ ಪ್ರದೇಶದಲ್ಲಿ ಅಪರಿಚಿತ ಬಂದೂಕುಧಾರಿಗಳು ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಕಳೆದ ಮಾರ್ಚ್ನಲ್ಲಿ ಸರಪಂಚ್ಗಳಾದ ಶಬೀರ್ ಅಹ್ಮದ್ ಮಿರ್, ಸಮೀರ್ ಅಹ್ಮದ್ ಭಟ್ ಮತ್ತು ಮೊಹಮ್ಮದ್ ಯಾಕೂಬ್ ದಾರ್ ಅವರನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದರು.
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಸರಪಂಚ್ನ ಹತ್ಯೆಯಲ್ಲಿ ಭಾಗಿಯಾಗಿರುವ ಹಿಜ್ಬುಲ್ ಮುಜಾಹಿದ್ದೀನ್ (ಎಚ್ಎಂ) ಮಾಡ್ಯೂಲ್ ಅನ್ನು ಭೇದಿಸಿದ ನಂತರ ಮೂವರು ಉಗ್ರಗಾಮಿ ಸಹಚರರನ್ನು ಸಹ ಬಂಧಿಸಲಾಗಿದೆ. ವರದಿಗಳ ಪ್ರಕಾರ, ಸರಪಂಚ್ನನ್ನು ದಿವಂಗತ ಮೊಹಮ್ಮದ್ ಸಾದಿಕ್ ಅವರ ಮಗ ಮಂಜೂರ್ ಅಹ್ಮದ್ ಬಾಂಗ್ರೂ ಎಂದು ಗುರುತಿಸಲಾಗಿದೆ. ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಆದರೆ, ಅಷ್ಟರಲ್ಲಾಗಲೇ ಅವರು ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದರು. ಇಂದು ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಗೋಷ್ ಬಗ್ ಪಟ್ಟಣ ಪ್ರದೇಶದಲ್ಲಿ ಸರಪಂಚ್ ಮಂಜೂರ್ ಅಹ್ಮದ್ ಬಂಗ್ರೂ ಅವರನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ. ಸರಪಂಚ್ಗೆ ಬುಲೆಟ್ನಿಂದ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.
