Breaking NewsLatestಮೆಟ್ರೋರಾಜಕೀಯರಾಜ್ಯಸುದ್ದಿ

ಇಂದು ಬಜೆಟ್ ಮಂಡಿಸಲಿರುವ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಇಂದು ಸಿಎಂ ಬಸವರಾಜ ಬೊಮ್ಮಾಯಿ ಮೊದಲ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಸಿಎಂ ಬೊಮ್ಮಾಯಿ ಅವರಿಂದ ಬಜೆಟ್ ಮಂಡನೆ ಆಗಲಿದೆ. ಇದೀಗ ಜನರಿಗೆ ಬಜೆಟ್ ಬಗ್ಗೆ ಭಾರಿ ನಿರೀಕ್ಷೆ ಹುಟ್ಟು ಹಾಕಿದೆ. ಈ ಬಾರಿ ಸೂಟ್ ಕೇಸ್ ಬದಲಿಗೆ ಫೈಲ್ ಹಿಡಿದು ಬೊಮ್ಮಾಯಿ ಬರಲಿದ್ದಾರೆ ಎಂದು ತಿಳಿದುಬಂದಿದೆ. ನೀರಾವರಿ, ಕೃಷಿ, ಆರೋಗ್ಯ, ಶಿಕ್ಷಣ, ಮಹಿಳೆಯರಿಗೆ ಹೆಚ್ಚು ಒತ್ತು ನೀಡುವಂತಹ ಬಜೆಟ್ ಮಂಡನೆ ಸಾಧ್ಯತೆ ಇದೆ.

ಹಲವು ದಿನಗಳಿಂದ ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್ ಮಂಡಿಸಲು ಸಿದ್ದತೆ ನಡೆಸುತ್ತಿದ್ದಾರೆ. ಇದೀಗ ಕೊರೊನಾನಿಂದ ಸಂಕಷ್ಟಕ್ಕೆ ಸಿಲುಕಿದ್ದ ಆರ್ಥಿಕತೆ ಇನ್ನೂ ಚೇತರಿಸಿಕೊಂಡಿಲ್ಲ. ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನ ಬಜೆಟ್​ ಮೇಲೆ ಭಾರಿ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button