Latestಜಿಲ್ಲಾ ಸುದ್ದಿಬೆಳಗಾವಿ

ಎಂಇಎಸ್ ಪುಂಡಾಟ: ಎಫ್ಐಆರ್ ದಾಖಲು: ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು : ಪ್ರಾತಃಸ್ಮರಣೀಯ ವೀರನಾದ, ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಎಂಇಎಸ್ ಪುಂಡರು ಹಾನಿ ಮಾಡಿರುವ ಘಟನೆಯನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ತೀವ್ರವಾಗಿ ಖಂಡಿಸಿದ್ದಾರೆ.

ಸಂಗೊಳ್ಳಿ ರಾಯಣ್ಣ ಹಾಗೂ ಶಿವಾಜಿ ಮಹಾರಾಜ್ ನಮ್ಮೆಲ್ಲರ ಹೆಮ್ಮೆಯ ಪ್ರತೀಕ. ಪ್ರತಿಯೊಬ್ಬ ನಾಗರಿಕರೂ ಹೆಮ್ಮೆ ಹಾಗೂ ಗರ್ವದಿಂದ ನೆನಸಿಕೊಳ್ಳುವಂತಹ ಭಾರತೀಯ ಪುತ್ರರು ಎಂದು ಹೇಳಿಕೆಯಲ್ಲಿ ಅವರು ತಿಳಿಸಿದ್ದಾರೆ.

ಇವರ ಹೆಸರಿನಲ್ಲಿ, ಕೆಲವು ಕಿಡಿಗೇಡಿಗಳು, ದುಷ್ಕೃತ್ಯ ನಡೆಸಿ, ಭಾಷಾ ಹಾಗೂ ಸಹೋದರತ್ವ ಬಾಂಧವ ಕೆಡಿಸುವ ಕೃತ್ಯ ಎಸಗಿರುವ ಘಟನೆ, ಅಕ್ಷಮ್ಯ ಅಪರಾಧ. ಈ ಕುರಿತು ಮಾಹಿತಿ ಪಡೆದುಕೊಂಡಿದ್ದೇನೆ, ಹಾಗೂ ಬೆಂಗಳೂರು ಹಾಗೂ ಬೆಳಗಾವಿ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಎಫ್ ಐ ಅರ್ ದಾಖಲಾಗಿದ್ದು, ಕೆಲವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದ ಜನತೆ ಶಾಂತಿ ಹಾಗೂ ಸಾಮರಸ್ಯ ಕಾಪಾಡಲು ಸಹಕರಿಸೇಕೆಂದು ಅವರು ಕೋರಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button