Breaking NewsLatestರಾಜ್ಯಸುದ್ದಿ

ಮಧ್ಯವರ್ತಿಗಳ ಮನೆ ಮೇಲೆ ಬೆಳ್ಳಂಬೆಳಗ್ಗೆ 9 ಕಡೆ ಎಸಿಬಿ ದಾಳಿ

ಬೆಂಗಳೂರು: ನಗರದಲ್ಲಿಂದು ಬೆಳ್ಳಂಬೆಳಗ್ಗೆ ಬಿಡಿಎ ಮಧ್ಯವರ್ತಿಗಳು, ಏಜೆಂಟ್‌ಗಳ ಮನೆ ಮೇಲೆ ಎಸಿಬಿ ದಾಳಿ ಮಾಡಿದೆ. ಬಿಡಿಎ ಅಧಿಕಾರಿಗಳ ಜತೆ ಸೇರಿಕೊಂಡು ಭ್ರಷ್ಟಾಚಾರ, ಅವ್ಯವಹಾರದಲ್ಲಿ ತೊಡಗಿದ ಆರೋಪ ಕೇಳಿಬಂದ ಹಿನ್ನೆಲೆ ಬೆಂಗಳೂರಿನಲ್ಲಿ ಏಕಕಾಲದಲ್ಲಿ ಎಸಿಬಿ SP ಉಮಾ ಪ್ರಶಾಂತ್ ನೇತೃತ್ವದಲ್ಲಿ 100ಕ್ಕೂ ಹೆಚ್ಚು ಅಧಿಕಾರಿಗಳು, 9 ಕಡೆ ದಾಳಿ ಮಾಡಿದ್ದಾರೆ.

ಚಾಮರಾಜಪೇಟೆಯ ಬಿ.ಎನ್.ರಘು, R.T.ನಗರ ಬಳಿಯ ಮನೋರಾಯನಪಾಳ್ಯದ ಮೋಹನ್, ದೊಮ್ಮಲೂರಿನ ಮನೋಜ್, ಆರ್.ಆರ್.ನಗರದ ತೇಜು, ಮಲ್ಲತ್ತಹಳ್ಳಿಯ ರತ್ನವೇಲು, ಮುದ್ದಿನಪಾಳ್ಯದ ಅಶ್ವತ್ಥ್ ಹಾಗೂ ಚಿಕ್ಕಹನುಮಯ್ಯ, ಚಾಮುಂಡೇಶ್ವರಿನಗರದ ರಾಮು ಮತ್ತು, ಲಕ್ಷ್ಮಣ ಎಂಬುವವರ ಮನೆ ಮೇಲೆ ಎಸಿಬಿ ಅಧಿಕಾರಿಗಳಿಂದ ದಾಳಿ ನಡೆದಿದೆ

ಇದುವರೆಗೂ ಬಿಡಿಎ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದ ಅಧಿಕಾರಿಗಳು ಇದೀಗ ಮಧ್ಯವರ್ತಿಗಳ ಮನೆ ಮೇಲೆ ದಾಳಿ ಮಾಡಿದ್ದಾರೆ. ಅಧಿಕಾರಿಗಳ ಮನೆಯಲ್ಲಿ, ಕಚೇರಿಯಲ್ಲಿ ಸಿಕ್ಕ ದಾಖಲೆಗಳ ಆಧಾರದ ಮೇಲೆ ದಾಳಿ ಮಾಡಲಾಗಿದ್ದು, ದಾಳಿಗೆ ಮುಖ್ಯ ಕಾರಣ ಕೆಂಪೇಗೌಡ ಲೇಔಟ್​ನಲ್ಲಿ ಬದಲಿ ನಿವೇಶನ ಹಂಚಿಕೆ ಎಂದು ತಿಳಿದುಬಂದಿದೆ.

ರೈತರ ಹೆಸರಲ್ಲಿ ಅಧಿಕಾರಿಗಳ ಜೊತೆ ಕೈ ಜೋಡಿಸಿ ಬದಲಿ ನಿವೇಶನ ಪಡೆದಿರುವ ಆರೋಪ ಕೇಳಿಬಂದಿದೆ. ರೈತರಿಗೆ ಬದಲಿ ನಿವೇಶನ ನೀಡುವ ಹೆಸರಲ್ಲಿ ಮಧ್ಯವರ್ತಿಗಳಿಂದ ಭ್ರಷ್ಟಾಚಾರ ಎಸಗಲಾಗಿದೆ. ಗೋಮಾಳ ಭೂಮಿಯನ್ನ ರೈತರ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಕ್ಕೆ ಮೋಸ ಮಾಡಿ, ಗೋಮಾಳ ಜಾಗಕ್ಕೆ ಮಧ್ಯವರ್ತಿಗಳು ಪರಿಹಾರ ಪಡೆದಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button