Latestಜಿಲ್ಲಾ ಸುದ್ದಿಹುಬ್ಬಳ್ಳಿ - ಧಾರವಾಡ

ಧಾರವಾಡದ ಯರಿಕೊಪ್ಪ ಬಳಿ ಬೈಕ್ ಅಪಘಾತ: ಸವಾರ ಸ್ಥಳದಲ್ಲೇ ಸಾವು

ಧಾರವಾಡ: ಮುಂದೆ ಹೋಗುತ್ತಿದ್ದ ಲಾರಿ ಓವರ್ ಟೆಕ್ ಮಾಡಲು ಹೋಗಿ ಬೈಕ್ ಅಪಘಾತ ಸಂಭವಿಸಿ ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಸಾವನ್ನಪ್ಪಿ, ಮತ್ತೋರ್ವನಿಗೆ ಗಂಭೀರವಾದ ಗಾಯವಾಗಿರುವ ಘಟನೆ ಧಾರವಾಡ ತಾಲೂಕಿನ ಯರಿಕೊಪ್ಪ ಗ್ರಾಮದ ಕ್ರಾಸ್ ಬಳಿ ನಡೆದಿದೆ.

ನಗರದ ಮದಿಹಾಳದ ನಿವಾಸಿ ಅಮಿತಸಿಂಗ್ (23) ಮೃತ ಯುವಕನಾಗಿದ್ದಾನೆ. ಈತನ ಪ್ರೀತಿಯಿಂದ ಜಾಕ್ ಎಂದು ಕರೆಯುತ್ತಿದ್ದರು. ಛಾಯಾಗ್ರಾಹಕನಾಗಿಯೂ ಕಾರ್ಯನಿರ್ವಹಿಸುತ್ತಿದ್ದ ಎಂದು ಹೇಳಲಾಗಿತ್ತಿದೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಯುವಕನನ್ನ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಸ್ಥಳೀಯರ ಮಾಹಿತಿ‌ ಮೇರೆಗೆ ಘಟನಾ ಸ್ಥಳಕ್ಕೆ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ಪರಿಶೀಲನೆ ಕೈಗೊಂಡಿದ್ದಾರೆ. ಈ ಕುರಿತು ಗ್ತಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button