Latestರಾಜ್ಯ

ಬಸವರಾಜ ಬೊಮ್ಮಾಯಿಗೆ ಹುಟ್ಟುಹಬ್ಬದ ಸಂಭ್ರಮ, ಗಣ್ಯರಿಂದ ಶುಭಾಶಯ

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಬೊಮ್ಮಾಯಿ ಅವರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರು ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

ಇನ್ನು ತಮ್ಮ ನೇತೃತ್ವದ ಸರ್ಕಾರ 6 ತಿಂಗಳು ಪೂರೈಸಿದ ಸಂತಸದಲ್ಲಿರುವ ಸಿಎಂ ಬೊಮ್ಮಾಯಿಗೆ ಶುಭಾಶಯ ಕೋರಿದ್ದಾರೆ.

ಈ ವೇಳೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ನಾನು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ. ಆದ್ರೂ ರಾಜ್ಯಾದ್ಯಂತ ಶುಭಾಶಯಗಳು ಬರುತ್ತಿವೆ. ನಮ್ಮ ಸಚಿವರು ಶಾಸಕರು ನಮ್ಮ ಕ್ಷೇತ್ರದ ಜನ ಶುಭಾಶಯ ಕೋರುತ್ತಿದ್ದಾರೆ. ನನ್ನ ಹುಟ್ಟುಹಬ್ಬಕ್ಕೆ ರಾಷ್ಟ್ರಪತಿ ನಿನ್ನೆಯೇ ಶುಭ ಕೋರಿದ್ದರು. ಇಂದು ಪ್ರಧಾನಿ ಮೋದಿ ಟ್ವೀಟ್ ಮಾಡಿ ಶುಭ ಕೋರಿದ್ದಾರೆ.

ತಮ್ಮ ಆಡಳಿತಾವಧಿ ಆರು ತಿಂಗಳ ಪೂರೈಕೆ ಹಿನ್ನೆಲೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ವಿಶೇಷ ಕಾರ್ಯಕ್ರಮ ಏರ್ಪಡಿಸಲಾಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button