ರಾಜ್ಯ ಹಾಗೂ ದೇಶದಲ್ಲಿ ಕಾಂಗ್ರೆಸ್ ಜನರ ವಿಶ್ವಾಸ ಕಳೆದುಕೊಂಡಿದೆ: ರಾಜ್ಯ ಉಸ್ತುವಾರಿ ಅರುಣ್ ಸಿಂಗ್

ಹುಬ್ಬಳ್ಳಿ: ಈ ಹಿಂದೆ ರಾಜ್ಯದಲ್ಲಿ ಸಿದ್ಧರಾಮಯ್ಯ ಸರ್ಕಾರ ಇದ್ದಾಗ ಸಾಕಷ್ಟು ಹಿಂದೂಗಳ ಹತ್ಯೆಯಾಗುತಿತ್ತು. ದೊಡ್ಡ ದೊಡ್ಡ ಭ್ರಷ್ಟಾಚಾರಗಳು ನಡೆದಿದ್ದವು. ಹಾಗಾಗಿ ರಾಜ್ಯ ಕಾಂಗ್ರೆಸ್ ಮೇಲೆ ಜೊತೆಗೆ ದೇಶದಲ್ಲಿ ಕಾಂಗ್ರೆಸ್ ಮೇಲೆ ಜನರಿಗೆ ವಿಶ್ವಾಸವಿಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ವಾಗ್ದಾಳಿ ನಡೆಸಿದರು.
ನಗರದಲ್ಲಿಂದು ಕಾರ್ಯಕಾರಣಿ ಸಭೆಯಲ್ಲಿ ಭಾಗಿಯಾಗುವ ವೇಳೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ನಲ್ಲಿ ಒಳಜಗಳ ನಡೆಯುತ್ತಿದೆ. ಬಿಜೆಪಿ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ, ಅದು ಸರಿಯಲ್ಲ. ದೇಶದಲ್ಲಿ ನರೇಂದ್ರ ಮೋದಿ ಹಾಗೂ ರಾಜ್ಯದಲ್ಲಿ ಬೊಮ್ಮಾಯಿ ನೇತೃತ್ವದಲ್ಲಿ ಉತ್ತಮ ಕೆಲಸಗಳು ಆಗುತ್ತಿವೆ. ಕಾಂಗ್ರೆಸ್ ಪಕ್ಷ ದೇಶದ ಜನರ ವಿಶ್ವಾಸ ಕಳೆದುಕೊಂಡಿದೆ ಎಂದು ಹರಿಹಾಯ್ದರು.
ನಾವು ಎರಡು ದಿನಗಳ ಕಾಲ ಕಾರ್ಯಕಾರಿಣಿ ಸಭೆಯಲ್ಲಿ ಸಾಕಷ್ಟು ವಿಚಾರಗಳನ್ನು ಚರ್ಚೆ ನಡೆಸಿದ್ದೇವೆ. ಮುಂಬರುವ ರಾಜ್ಯ ವಿಧಾನ ಸಭೆ ಚುನಾವಣೆಯಲ್ಲಿ 150ಕ್ಕೂ ಅಧಿಕಾ ಸ್ಥಾನ ಒಡೆಯುವ ಸಂಕಲ್ಪವನ್ನು ಕಾರ್ಯಕಾರಣಿಯಲ್ಲಿ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಹಾಗೂ ಅವರ ಸಾಧನೆ ಸೇರಿದಂತೆ ಮೋದಿಯವರ ಮಾರ್ಗದರ್ಶನದಲ್ಲಿ ಚುನಾವಣೆ ಎದುರಿಸಲಿದ್ದೇವೆ. ಚುನಾವಣೆಗೂ ನಾವೆಲ್ಲ ಈಗ ಸನ್ನದ್ಧರಾಗಿದ್ದೇವೆ ಎಂದು ಹೇಳಿದರು.



