Breaking NewsLatestಉತ್ತರ ಕನ್ನಡಜಿಲ್ಲಾ ಸುದ್ದಿರಾಜಕೀಯ
ಕೊರೊನಾ ನಿಯಂತ್ರಣಕ್ಕೆ ನೈಟ್ ಕರ್ಫ್ಯೂ ಪರಿಹಾರವಲ್ಲ: ಸಿ ಟಿ ರವಿ

ಕಾರವಾರ : ಕೊರೊನಾ ನಿಯಂತ್ರಣಕ್ಕೆ ಲಾಕ್‍ಡೌನ್, ನೈಟ್ ಕರ್ಫ್ಯೂ ಪರಿಹಾರವಲ್ಲ. ಜನ ಸಾಮಾನ್ಯರು ನೂರಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ತನ್ನ ನಿರ್ಧಾರ ಬದಲಿಸಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.
ಗೋವಾ ರಾಜ್ಯದ ಪಣಜಿಯಲ್ಲಿ ಹೇಳಿಕೆ ನೀಡಿದ ಅವರು ನಾನು ಕರ್ನಾಟಕ ಸರ್ಕಾರದ ನಿರ್ಧಾರವನ್ನು ವಿರೋಧಿಸುತ್ತಿಲ್ಲ. ಪ್ರಸ್ತುತ ಸಂದರ್ಭದಲ್ಲಿ ಲಾಕ್‍ಡೌನ್ ಮತ್ತು ನೈಟ್ ಕರ್ಫ್ಯೂ ವಿಧಿಸಿದರೆ ಜನಸಾಮಾನ್ಯರಿಗೆ ಹೊರೆಯಾಗಲಿದೆ ಎಂದರು.
ಸರ್ಕಾರ ಇದರ ಬಗ್ಗೆ ಗಂಭೀರ ಚಿಂತನೆ ನಡೆಸಬೇಕು. ಪರಿಸ್ಥಿತಿಯನ್ನು ಪರಾಮರ್ಶಿಸಿ ತಜ್ಞರ ಸಲಹೆ ಪಡೆದು ಸರ್ಕಾರ ಕ್ರಮ ತೆಗೆದುಕೊಳ್ಳಲು ನನ್ನ ಅಭ್ಯಂತರವಿಲ್ಲ. ನನ್ನ ವೈಯಕ್ತಿಕ ಅಭಿಪ್ರಾಯದಲ್ಲಿ ಹೇಳುವುದಾದರೆ ಲಾಕ್ ಡೌನ್ ಹೇರಬಾರದು. ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕಾದ ಅಗತ್ಯವಿಲ್ಲ ಎಂದು ಅವರು ತಿಳಿಸಿದರು.
