Latestರಾಜ್ಯಸುದ್ದಿ

ಬಿಎಸ್ ವೈ ಮೊಮ್ಮಗಳು ಆತ್ಮಹತ್ಯೆ: ಯಡಿಯೂರಪ್ಪಗೆ ಸಾಂತ್ವನ ಹೇಳಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬಿಎಸ್ ವೈ ನಿವಾಸಕ್ಕೆ ಭೇಟಿ ನೀಡಿದರು.

ಬಿ.ಎಸ್. ಯಡಿಯೂರಪ್ಪ ಅವರ ಕಾವೇರಿ ನಿವಾಸಕ್ಕೆ ಆಗಮಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ ನೀಡಿ, ಬಿಎಸ್ ವೈ ಅವರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ. ಜೊತೆಗೆ ಸಿಎಂ ಬಸವರಾಜ ಬೊಮ್ಮಾಯಿ ಕೂಡ ಅವರೊಂದಿಗೆ ಆಗಮಿಸಿ ಸಾಂತ್ವನ ಹೇಳಿದ್ದಾರೆ.

ಸೌಂದರ್ಯ ಸಾವು ಪ್ರಕರಣಕ್ಕೆ ಸಂಬಂಧಿಸಿ ಹೈಗ್ರೌಂಡ್ಸ್ ಪೊಲೀಸರು ಅಪಾರ್ಟ್ ಮೆಂಟ್ ನಲ್ಲಿ ತನಿಖೆ ನಡೆಸಿದ್ದಾರೆ. ವಸಂತನಗರದ ಕನ್ನಿಂಗ್ ಹ್ಯಾಂ ರಸ್ತೆಯಲ್ಲಿರುವ ಅಪಾರ್ಟ್ ಮೆಂಟ್ ನಲ್ಲಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button