
ಬೆಂಗಳೂರು: ಮುಂದಿನ ಸಿಎಂ ಯಾರಾಗಬೇಕೆಂಬ ಸಲಹೆಯನ್ನು ನಾನು ನೀಡುವುದಿಲ್ಲ ಎಂದು ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರದೇ ಹೆಸರನ್ನು ಸಿಎಂ ಸ್ಥಾನಕ್ಕೆ ಶಿಪಾರಸು ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.
ಹೈಕಮಾಂಡ್ ನನಗೆ ಇಲ್ಲಿಯವರೆಗೆ ಯಾವುದೇ ಸೂಚನೆ ನೀಡಿಲ್ಲ. ಜುಲೈ 25ರ ಸೂಚನೆಗೆ ಕಾಯುತ್ತಿದ್ದೇನೆ ಎಂದು ಅವರು ಹೇಳಿದರು.
ಹೈಕಮಾಂಡ್ನಿಂದ ಸೂಚನೆ ಬರುವವರೆಗೂ ನಾನು ಸಿಎಂ ಆಗಿಯೇ ಇರುತ್ತೇನೆ. ಸೂಚನೆ ಬಂದ ತಕ್ಷಣ ರಾಜೀನಾಮೆ ನೀಡುತ್ತೇನೆ. ರಾಜೀನಾಮೆ ನೀಡಲು ಸಿದ್ಧ ಎಂದು ಎರಡು ತಿಂಗಳ ಹಿಂದೆಯೇ ಹೇಳಿದ್ದೆ ಎಂದು ಅವರು ಸ್ಪಷ್ಟಪಡಿಸಿದರು.
ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ, ಪಕ್ಷಕ್ಕಾಗಿ ದುಡಿಯುವೆ. ಪಕ್ಷ ಸಂಘಟನೆಯ ಕೆಲಸವನ್ನು ಕೈಗೆತ್ತಿಕೊಳ್ಳುವೆ ಎಂದು ಅವರು ಹೇಳಿದ್ದಾರೆ.
ಏಕಾಂಗಿ ಬಿಎಸ್ವೈ
ಸಿಎಂ ಬಿಎಸ್ವೈ ಗುರುವಾರ ವಿಧಾನಸೌಧದ ಮೂರನೇ ಮಹಡಿಯ ತಮ್ಮ ಕೊಠಡಿಯಲ್ಲಿ ಏಕಾಂಗಿಯಾಗಿ ಕುಳಿತಿದ್ದುದು ಕಂಡುಬಂತು. ಗೃಹಸಚಿವ ಬೊಮ್ಮಾಯಿ ಸೇರಿದಂತೆ ಕೆಲವು ಸಚಿವರು ಬಮದು ಅವರನ್ನು ಭೇಟಿ ಮಾಡಿದರು.



