Breaking NewsLatestರಾಜಕೀಯರಾಜ್ಯ
ಮತಾಂತರ ನಿಷೇಧ ವಿಧೇಯಕಕ್ಕೆ ರಾಜ್ಯ ಸಂಪುಟ ಅನುಮೋದನೆ

ಬೆಳಗಾವಿ: ವಿರೋಧ ಪಕ್ಷಗಳ ತೀವ್ರ ವಿರೋಧಕ್ಕೆ ಕಾರಣವಾಗಿರುವ ಮತಾಂತರ ನಿಷೇಧ ವಿಧೇಯಕಕ್ಕೆ ಸೋಮವಾರ ನಡೆದ ರಾಜ್ಯ ಸಂಪುಟ ಸಭೆ ಅನುಮೋದನೆ ನೀಡಿದೆ.
ಪ್ರಸಕ್ತ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಗೊತ್ತಾಗಿದೆ.
ಮತಾಂತರ ನಿಷೇಧ ಕಾಯ್ದೆ ಜಾರಿಗೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಜೆಡಿಎಸ್ ಕೂಡ ಈ ವಿಧೇಯಕವನ್ನು ಬೆಂಬಲಿಸದಿರಲು ತೀರ್ಮಾನಿಸಿದೆ.
