Latestರಾಷ್ಟ್ರೀಯ

ಕಾರು- ಕಂಟೈನರ್ ಡಿಕ್ಕಿ: ಸ್ಥಳದಲ್ಲೇ ಐವರು ಸಾವು

ಮಹಾರಾಷ್ಟ್ರ: ಪುಣೆ- ಮುಂಬೈ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ.ಬೆಳ್ಳಂಬೆಳಗ್ಗೆ ಕಾರು ಮತ್ತು ಕಂಟೈನರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದಾರೆ. ಮೃತಪಟ್ಟವರೆಲ್ಲಾ ಹರಿಯಾಣ ಮೂಲದವರು ಎಂದು ತಿಳಿದುಬಂದಿದೆ.

ಕಾರು ಲೋನಾವಾಲಾ ಬಳಿ ಮುಂಬೈನಿಂದ ಪುಣೆ ಕಡೆ ತೆರಳುತ್ತಿತ್ತು. ಈ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ಕಂಟೈನರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಐವರು ಮೃತಪಟ್ಟಿದ್ದಾರೆ.

ಈ ಅಪಘಾತದಿಂದ ಹೆದ್ದಾರಿಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿದ್ದು, ಸವಾರರಿಗೆ ಕಿರಿಕಿರಿ ಉಂಟಾಗಿತ್ತು. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button