Breaking NewsLatestಕ್ರೈಂಜಿಲ್ಲಾ ಸುದ್ದಿಹುಬ್ಬಳ್ಳಿ - ಧಾರವಾಡ

ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದವರ ಬಂಧನ, ಇಬ್ಬರು ಯುವತಿಯರ ರಕ್ಷಣೆ

ಹುಬ್ಬಳ್ಳಿ: ಯುತಿಯರಿಗೆ ಕೆಲಸ ಕೋಡಿಸುವುದಾಗಿ ನಂಬಿಸಿ ಕರೆತಂದು ಹೆಚ್ಚಿನ‌ ಹಣದ ಆಸೆ ತೋರಿಸಿ, ಅಪಾರ್ಟ್ಮೆಂಟ್‌ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು ಇಬ್ಬರು ಯುವತಿಯರನ್ನು ರಕ್ಷಿಸಿದ್ದಾರೆ.

ಗೋಕುಲ ರಸ್ತೆಯ ಪೊಲೀಸ್ ಠಾಣೆ ವ್ಯಾಪ್ತಿಯ ಡಾಲರ್ಸ್ ಕಾಲೋನಿಯ ನಿಕೇತನ ಅಪಾರ್ಟ್ಮೆಂಟ್‌ನಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ದಾಳಿ ವೇಳೆ ವೇಶ್ಯಾವಾಟಿಕೆ ನಡೆಸುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿದ್ದು, ಇಬ್ಬರು ಯುವತಿಯರನ್ನು ರಕ್ಷಿಸಿದ್ದಾರೆ.

ಹುಬ್ಬಳ್ಳಿ ಹಾಗೂ ತುಮಕೂರು ಮೂಲಕ ಅಮಾಯಕ ಯುವತಿಯರನ್ನು ಕೆಲಸ ಕೊಡಿಸುವುದಾಗಿ ನಗರಕ್ಕೆ ಕರೆತಂದು, ತದನಂತರ ಹೆಚ್ಚಿನ ಹಣದ ಆಮಿಷ ಒಡ್ಡಿ ವೇಶ್ಯಾವಾಟಿಕೆ ದಂಧೆಯಲ್ಲಿ ದೂಡಲಾಗಿತ್ತು ಎಂದು ತಿಳಿದುಬಂದಿದೆ. ಗಿರಾಕಿಗಳಿಗೆ ಯುವತಿಯರ ಫೋಟೋಗಳನ್ನು ಕಳುಹಿಸಿ, ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು ಎಂದು ಮೂಲಗಳಿಂದ ತಿಳಿದ ಬಂದಿದ್ದು, ಗೋಕುಲ ರಸ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button