
ನವದೆಹಲಿ: ಕೇಂದ್ರ ಸರ್ಕಾರದ ನೂತನ ಮುಖ್ಯ ಆರ್ಥಿಕ ಸಲಹೆಗಾರರನ್ನುವಿ. ಅನಂತ ನಾಗೇಶ್ವರನ್ ಅವರನ್ನು ನೇಮಕ ಮಾಡಿದೆ. ಫೆಬ್ರವರಿ 1 ರಂದು ಕೇಂದ್ರ ಬಜೆಟ್ ಮಂಡನೆ ಇದ್ದು, ಕೆಲವೇ ದಿನಗಳ ಮುಂಚಿತವಾಗಿ ಕೇಂದ್ರವು ನಾಗೇಶ್ವರನ್ ಅವರನ್ನು ನೇಮಿಸಿದೆ.
ಅನಂತ್ ನಾಗೇಶ್ವರನ್ ಅವರು ಲೇಖಕ, ಪ್ರಾಧ್ಯಾಪಕ ಹಾಗೂ ಹಣಕಾಸು ಸಲಹೆಗಾರರಾಗಿ ಕೆಲಸ ಮಾಡಿದ್ದಾರೆ. ಅವರು ಭಾರತ ಮತ್ತು ಸಿಂಗಾಪುರದಲ್ಲಿ ಹಲವಾರು ವ್ಯಾಪಾರ ಮತ್ತು ನಿರ್ವಹಣಾ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.
ನಾಗೇಶ್ವರನ್ ಅವರು ಕ್ರೆಡಿಟ್ ಸ್ಯೂಸ್ ಗ್ರೂಪ್ ಎಜಿ ಮತ್ತು ಜೂಲಿಯಸ್ ಬೇರ್ ಗ್ರೂಪ್ನ ಶೈಕ್ಷಣಿಕ ಮತ್ತು ಮಾಜಿ ಕಾರ್ಯನಿರ್ವಾಹಕ ಮೂರು ವರ್ಷಗಳ ಅವಧಿ ಮುಗಿದ ನಂತರ ಡಿಸೆಂಬರ್ 2021 ರಲ್ಲಿ ಸಿಇಎ ಕಚೇರಿಯನ್ನು ತೊರೆದ ಕೆ ವಿ ಸುಬ್ರಮಣಿಯನ್ ಅವರ ಉತ್ತರಾಧಿಕಾರಿಯಾಗಿದ್ದಾರೆ.



