
ಮುಂಬೈ : ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ವಿರುದ್ಧ ಜಾರಿ ನಿರ್ದೇಶನಾಲಯ ಅಧಿಕಾರಿಗಳು ನ್ಯಾಯಾಲಯಕ್ಕೆ 700 ಪುಟಗಳ ಆರೋಪ ಪಟ್ಟಿ ದಾಖಲಿಸಿದ್ದಾರೆ.ಇಲ್ಲಿನ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿರುವ ಆರೋಪಟ್ಟಿಯಲ್ಲಿ ದೇಶಮುಖ್ ಅವರ ಪುತ್ರರನ್ನು ಆರೋಪಿಗಳೆಂದು ಹೆಸರಿಸಲಾಗಿದೆ.ದೇಶಮುಖ್ ಅವರ ಖಾಸಗಿ ಕಾರ್ಯದರ್ಶಿ ಸಂಜೀವ್ ಪಲಾಂಡೆ ಮತ್ತು ಆಪ್ತ ಸಹಾಯಕ ಕುಂದನ್ ಶಿಂಧೆ ಸೇರಿದಂತೆ 14 ಆರೋಪಿಗಳ ವಿರುದ್ಧ ಈ ಮೊದಲು ಆರೋಪಪಟ್ಟಿ ಸಲ್ಲಿಕೆಯಾಗಿತ್ತು. ಕಳೆದ ನವೆಂಬರ್ 1 ರಂದು ಇಡಿ ಅಧಿಕಾರಿಗಳು ಮಾಜಿ ಸಚಿವರನ್ನು ಬಂಧಿಸಿದ್ದು, ಸದ್ಯ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.



