Breaking NewsLatestರಾಜ್ಯಸುದ್ದಿ

2022-23ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಆರಂಭಿಸಿದ ಸಿಎಂ

ಇಂದು ಸಿಎಂ ಬಸವರಾಜ ಬೊಮ್ಮಾಯಿ ಚೊಚ್ಚಲ ಬಜೆಟ್ ಮಂಡಿಸುತ್ತಿದ್ದಾರೆ. ಕೋವಿಡ್ ಮಧ್ಯೆಯೂ ಬಿಜೆಪಿ ಸರ್ಕಾರ ಬಜೆಟ್​ ಮಂಡಿಸಲು ತಯಾರಿ ನಡೆಸಿದ್ದು, ಯಾವೆಲ್ಲಾ ಕ್ಷೇತ್ರಕ್ಕೆ ಬೊಮ್ಮಾಯಿ ಸರ್ಕಾರ ಕೊಡುಗೆ ನೀಡಲಿದೆ ಅನ್ನೋ ಕುತೂಹಲ ಗರಿಗೆದರಿದೆ. ಮುಂದಿನ ಚುನಾವಣೆ ಹಾಗೂ ಕೋವಿಡ್​ನಿಂದ ಹದಗೆಟ್ಟ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿರಿಸಿಕೊಂಡು ಈ ಬಾರಿಯ ಬಜೆಟ್​ ಮಂಡನೆಯಾಗುತ್ತಿದ್ದು, ಬಜೆಟ್​​ಗೂ ಮುನ್ನ ಬೊಮ್ಮಾಯಿ ದೇವಾಲಯಕ್ಕೆ ನೀಡಿ ದೇವರ ದರ್ಶನ ಪಡೆದುಕೊಂಡಿದ್ದಾರೆ. ಆಂಜನೇಯ ಸ್ವಾಮಿ ದೇವಾಲಯದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪೂಜೆ ಸಲ್ಲಿಸಿ, ಸಮಸ್ತ ಕರ್ನಾಟಕ ಕ್ಷೇಮೋದಯ ಹೆಸರಲ್ಲಿ ಸಿಎಂ ಅರ್ಚನೆ ಮಾಡಿಸಿದ್ದಾರೆ. ವಿಧಾನಸೌಧದಲ್ಲಿ ಸಿಎಂ ಬೊಮ್ಮಾಯಿ 2022-23 ನೇ ಸಾಲಿನ ರಾಜ್ಯ ಬಜೆಟ್​ ಮಂಡನೆ ಆರಂಭಿಸಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button