
ಬೆಂಗಳೂರು: ಸಿಂಧಗಿ ಮತ್ತು ಹಾನಗಲ್ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಪಕ್ಷದ ವೀಕ್ಷಕರನ್ನು ಕಳುಹಿಸಿ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎರಡೂ ಕ್ಷೇತ್ರಗಳಲ್ಲೂ ಪಕ್ಷ ಜಯಗಳಿಸುವ ವಿಶ್ವಾಸವಿದೆ. ಪಕ್ಷದ ನಾಯಕತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದರು.
ಎರಡೂ ಕ್ಷೇತ್ರಗಳ ಚುನಾವಣೆ ಸಂಬಂಧ ದಾವಣಗೆರೆಯಲ್ಲಿ ಇತ್ತೀಚೆಗೆ ನಡೆದ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಈಗಾಗಲೇ ಚರ್ಚಿಸಲಾಗಿದ್ದು ಶೀಘ್ರ ಪಕ್ಷದ ವೀಕ್ಷಕರ ನೇಮಕ ನಡೆಯಲಿದೆ ಎಂದರು.



