Breaking NewsLatestಮೆಟ್ರೋರಾಜ್ಯಸುದ್ದಿ

ಫೆ. 7 ರಿಂದ ಆಯವ್ಯಯದ ಪೂರ್ವಭಾವಿ ಸಿದ್ಧತೆ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಫೆಬ್ರವರಿ 07 ರಿಂದ ವ್ಯಯದ ಪೂರ್ವಭಾವಿ ಸಿದ್ಧತೆ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.

ವಿವಿಧ ಇಲಾಖೆಗಳೊಂದಿಗೆ ಆಯವ್ಯಯ ಪೂರ್ವಭಾವಿ ಸಭೆಗಳನ್ನು ಮುಂದಿನ ವಾರದಿಂದ ನಡೆಸಲಾಗುವುದು. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ದೊರೆಯಲಿರುವ ಸಾಲ ಹಾಗೂ ಅನುದಾನಗಳ ಆಧಾರದ ಮೇಲೆ ರಾಜ್ಯ ಸರ್ಕಾರದ ಆಯವ್ಯಯದ ನಿರ್ಣಯಗಳನ್ನು ಕೈಗೊಳ್ಳಲಾಗುವುದು ಎಂದರು.

ನಾಳೆ ದೆಹಲಿ ಪ್ರವಾಸ:

ಆಯವ್ಯಯಕ್ಕೂ ಮುನ್ನ ರಾಜ್ಯದ ಎಲ್ಲಾ ಸಂಸದರೊಂದಿಗೆ ಸಭೆ ಸೇರುವ ವಾಡಿಕೆಯಿದೆ. ಈ ಸಭೆಗೆ ಸಮಯ ನಿಗದಿಯಾಗುತ್ತಿದೆ. ಅಂತರರಾಜ್ಯ ಜಲವಿವಾದಗಳಲ್ಲಿ ರಾಜ್ಯವನ್ನು ಪ್ರತಿನಿಧಿಸುವ ವಕೀಲರನ್ನೂ ಭೇಟಿಯಾಗಲಿದ್ದು, ಬಹುತೇಕವಾಗಿ ನಾಳೆ ದೆಹಲಿಗೆ ಪ್ರಯಾಣ ಬೆಳೆಸುವ ಸಾಧ್ಯತೆಗಳಿವೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Spread the love

Related Articles

Leave a Reply

Your email address will not be published. Required fields are marked *

Back to top button