
ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಳೆದ ಎರಡು ತಿಂಗಳಲ್ಲಿ ಸುರಿದ ಮಳೆಯಿಂದ ಉಂಟಾಗಿರುವ ಹಾನಿಯ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಡಿಯೊ ಕಾನ್ಫರೆನ್ಸ್ ಮೂಲಕ ಮಾಹಿತಿ ಪಡೆದರು.
ಕಂದಾಯ ಸಚಿವ ಆರ್. ಅಶೋಕ್, ವಸತಿ ಸಚಿವ ವಿ. ಸೋಮಣ್ಣ, ತೋಟಗಾರಿಕೆ ಸಚಿವ ಮುನಿರತ್ನ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತ ವಂದಿತಾ ಶರ್ಮ, ಗೃಹ ಮತ್ತು ಲೋಕೋಪಯೋಗಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ , ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.



