Breaking NewsLatestಕಲಬುರ್ಗಿಜಿಲ್ಲಾ ಸುದ್ದಿ
ದೇವಾಲಯ ತೆರುವಿಗೆ ಕೈಹಾಕಬೇಡಿ: ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆ

ಕಲಬುರಗಿ: ಅನಧಿಕೃತ ದೇವಸ್ಥಾನ ತೆರವು ವಿಚಾರವಾಗಿ ಇನ್ನೂ ಚರ್ಚೆ ಮಾಡುತ್ತಿದ್ದೇವೆ. ಸ್ಪಷ್ಟ ನಿರ್ದೇಶನ ನೀಡುವರೆಗೆ ಯಾರೂ ಕೂಡ ಅವಸರದಲ್ಲಿ ದೇವಾಲಯ ತೆರವು ಮತ್ತು ಧಕ್ಕೆ ಮಾಡಬಾರದು ಎಂದು ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ಕೊಟ್ಟಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಸಿಎಂ, ನಮ್ಮ ಧರ್ಮದ ದೇವಾಲಯ ರಕ್ಷಣೆ ಮಾಡಿಕೊಳ್ಳುತ್ತೇವೆ.ಈ ವಿಚಾರದ ಬಗ್ಗೆ ಗಂಭೀರ ಚಿಂತನೆ ಮಾಡುತ್ತಿದ್ದೇವೆ. ಕೂಡಲೇ ಈ ಬಗ್ಗೆ ಪರಿಹಾರ ಕಂಡು ಕೊಳ್ಳುತ್ತೇವೆ ಅಂತ ಹೇಳಿದ ಸಿಎಂ, ದೇವಸ್ಥಾನ ತಿರುವ ವಿಚಾರವಾಗಿ ಮೈಸೂರು ಜಿಲ್ಲಾಧಿಕಾರಿ ಮತ್ತು ತಹಶೀಲ್ದಾರ್ಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ ಎಂದರು.
