Breaking NewsLatestಕಲಬುರ್ಗಿ

ಅಂಬರೀಷ್ ಸ್ಮಾರಕಕ್ಕೆ ಒಪ್ಪಿಗೆ ನೀಡಿದ್ದಕ್ಕೆ ಸಮಾಧಾನವಿದೆ; ಎಚ್​ಡಿಕೆಗೆ ಸಿಎಂ ಪರೋಕ್ಷ ತಿರುಗೇಟು?

ಕಲಬುರ್ಗಿ: ಅಂಬರೀಷ್ ಸ್ಮಾರಕ ನಿರ್ಮಾಣಕ್ಕೆ ನಮ್ಮ ಸರ್ಕಾರ ಇದ್ದಾಗ ಒಪ್ಪಿಗೆ ನೀಡಿರುವ ಬಗ್ಗೆ ನನಗೆ ಸಮಾಧಾನ ಇದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ಸಿಎಂ, ಹೀಗೆ ಹೇಳುವ ಮೂಲಕ ಪರೋಕ್ಷವಾಗಿ ಎಚ್‌ಡಿಕೆಗೆ ತಿರುಗೇಟು ನೀಡಿರುವ ಸಿಎಂ, ಸುಮಲತಾ ಮತ್ತು ಕುಮಾರಸ್ವಾಮಿ ಈ ರೀತಿ ಕಚ್ಚಾಡಾವ ಅವಶ್ಯಕತೆ ಇಲ್ಲ. ಎಲ್ಲರೂ ಸಹೋದರರಂತೆ ಬಾಳುವುದನ್ನು ಕಲಿಯಬೇಕು. ಅಲ್ಲಿನ ಅಭಿವೃದ್ಧಿ ವಿಚಾರದಲ್ಲಿ ಎಲ್ಲರೂ ಒಟ್ಟಾಗಿ ಹೋಗಬೇಕು ಎಂದು ಹೇಳಿದರು.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಸಿಎಂ ಸ್ಪಷ್ಡಪಡಿಸಿದ್ದಾರೆ. ಸಂಪುಟ ವಿಸ್ತರಣೆ ಅಥವಾ ಸಚಿವರನ್ನು ಕೈಬಿಡುವ ಬಗ್ಗೆ ಯಾವುದೇ ಚಿಂತನೆ ನಡೆದಿಲ್ಲ. ಸಂಪುಟ ವಿಸ್ತರಣೆ ವಿಚಾರ ಚರ್ಚೆಗೆ ಬಂದ್ರೆ ತಿಳಿಸ್ತೇನೆ ಎಂದು ಹೇಳಿದರು.

Spread the love

Related Articles

Leave a Reply

Your email address will not be published. Required fields are marked *

Back to top button