Breaking NewsLatestರಾಜಕೀಯರಾಜ್ಯ
ಬಿಟ್ ಕಾಯಿನ್ ಹಗರಣ: ಸಿಎಂ ದೆಹಲಿಗೆ ದೌಡು?

ಬೆಂಗಳೂರು: ಅಂತರರಾಜ್ಯ ಜಲ ವಿವಾದಗಳ ಕುರಿತು ಹಾಗೂ ರಾಜ್ಯಕ್ಕೆ ಸಂಬಂಧಿಸಿದ ಇತರೆ ವಿಷಯಗಳ ಕುರಿತು ಕೇಂದ್ರ ಸಚಿವರನ್ನು ಭೇಟಿಯಾಗಿ ಚರ್ಚೆ ನಡೆಸಲು ನವದೆಹಲಿಗೆ ತೆರಳುತ್ತಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬುಧವಾರ ಅವರು ನವದೆಹಲಿಗೆ ತೆರಳುವ ಮುನ್ನ ಆರ್.ಟಿ.ನಗರದ ನಿವಾಸದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಸಮಯ ಕೋರಲಾಗಿದೆ. ಖಾಸಗಿ ಚಾನೆಲ್ವೊಂದರ ಆಲ್ ಇಂಡಿಯಾ ಕಾನ್ ಕ್ಲೇವ್ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
ಈ ನಡುವೆ ದಿನದಿಂದ ದಿನಕ್ಕೆ ಗಂಭೀರ ರೂಪ ಪಡೆಯುತ್ತಿರುವ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪಕ್ಷ ವರಿಷ್ಠರಿಗೆ ಸಿಎಂ ಬೊಮ್ಮಾಯಿ ತಮ್ಮ ದೆಹಲಿ ಭೇಟಿ ಸಂದರ್ಭದಲ್ಲಿ ವಿವರಣೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಹಗರಣದಲ್ಲಿ ಬಿಜೆಪಿಯ ಪ್ರಭಾವಿ ನಾಯಕರೂ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಹೇಳಲಾಗುತ್ತಿದೆ.
