Breaking NewsLatestರಾಜ್ಯಸುದ್ದಿ
Karnataka Covid Update: ರಾಜ್ಯದಲ್ಲಿ ಇಂದು 25 ಸಾವಿರ ಕೊರೊನಾ ಕೇಸ್ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 25,005 ಕೊರೊನಾ ಕೇಸ್ಗಳು ಹಾಗೂ ಬೆಂಗಳೂರಿನಲ್ಲಿ 18,374 ಪ್ರಕರಣಗಳು ಪತ್ತೆಯಾಗಿದ್ದು, ಇದೇ ಸಂದರ್ಭದಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ.
ಈ ಬಗ್ಗೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಕಳೆದ 24 ಗಂಟೆಯಲ್ಲಿ 2,01,704 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ.
ಇವರಲ್ಲಿ ಬೆಂಗಳೂರಿನಲ್ಲಿ 18,374 ಕೊರೊನಾ ಪ್ರಕರಣಗಳು ಹಾಗೂ 3 ಮಂದಿ ಸಾವನ್ನಪ್ಪಿದ್ದಾರೆ.
ರಾಜ್ಯಾಧ್ಯಂತ 2,363 ಜನರು ಡಿಸ್ಚಾರ್ಜ್ ಆಗಿದ್ದಾರೆ. 8 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದ ಪಾಟಿಸಿವಿಟಿ ದರ ಶೇ 12.39ಕ್ಕೆ ಏರಿಕೆಯಾಗಿದೆ.
ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,15,733ಕ್ಕೆ ಏರಿಕೆಯಾಗಿದೆ. ಇದರಲ್ಲಿ ಬೆಂಗಳೂರು ನಗರದಲ್ಲಿಯೇ 91 ಸಾವಿರ ಸಕ್ರಿಯ ಪ್ರಕರಣಗಳಿವೆ.
