Breaking NewsLatestರಾಷ್ಟ್ರೀಯಸುದ್ದಿ

India Covid Update: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1.41,986 ಕೇಸ್ ಪತ್ತೆ!

ನವದೆಹಲಿ: ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 1,41,986 ಕೋವಿಡ್​​ ಪ್ರಕರಣಗಳು ಪತ್ತೆಯಾಗಿವೆ.

ಈ ಕುರಿತು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಈ ಮೂಲಕ ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 3,53,68,372 ಕ್ಕೆ ಏರಿಕೆಯಾಗಿದೆ. ಹಾಗೆಯೇ 285 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ 4,83,463ಕ್ಕೆ ಏರಿಕೆಯಾಗಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 4,72,169ಕ್ಕೆ ಏರಿಕೆಯಾಗಿದೆ. 40,895 ಮಂದಿ ಕೊರೊನಾದಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಡಿಸ್ಚಾರ್ಜ್​​​​ ಆಗಿದ್ದಾರೆ. ಒಟ್ಟಾರೆ ಗುಣಮುಖರಾದವರ ಸಂಖ್ಯೆ 3,44,12,740ಕ್ಕೆ ಏರಿದೆ.

ಮಹಾರಾಷ್ಟ್ರದಲ್ಲಿ 40,925 ಪ್ರಕರಣಗಳು ದಾಖಲಾಗಿದ್ದು, 18,213 ಪ್ರಕರಣಗಳೊಂದಿಗೆ ಪಶ್ಚಿಮ ಬಂಗಾಳ, 17,335 ಪ್ರಕರಣಗಳೊಂದಿಗೆ ದೆಹಲಿ, 8,981 ಪ್ರಕರಣಗಳೊಂದಿಗೆ ತಮಿಳುನಾಡು ಮತ್ತು 8,449 ಪ್ರಕರಣಗಳೊಂದಿಗೆ ಕರ್ನಾಟಕದಲ್ಲಿ ಗರಿಷ್ಠ ಪ್ರಕರಣಗಳು ದಾಖಲಾಗಿವೆ

Spread the love

Related Articles

Leave a Reply

Your email address will not be published. Required fields are marked *

Back to top button