Breaking NewsLatestರಾಷ್ಟ್ರೀಯಸುದ್ದಿ
Inida Covid Updates: ದೇಶದಲ್ಲಿ ಇಂದು 3.17 ಲಕ್ಷ ಕೊರೊನಾ ಕೇಸ್ ಪತ್ತೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3.17,532 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇದೇ ಸಂದರ್ಭದಲ್ಲಿ 491 ಮಂದಿ ಸಾವನ್ನಪ್ಪಿದ್ದಾರೆ.
ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,82,18,773ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,87,693ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 19,24,051ಕ್ಕೆ ತಲುಪಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 2,23,990 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,58,07,029 ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ 18,69,642 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 70,74,21,650 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
