Breaking NewsLatestರಾಷ್ಟ್ರೀಯಸುದ್ದಿ
India Covid Updates : ದೇಶದಲ್ಲಿ ಇಂದು 71 ಸಾವಿರ ಕೊರೊನಾ ಕೇಸ್ ಪತ್ತೆ

ಬೆಂಗಳೂರು: ಕಳೆದ ಮೂರು ದಿನಗಳಿಂದ ಕೊರೊನಾ ಪ್ರಕರಣಗಳು ಕಡಿಮೆಯಾಗುತ್ತಿದೆ. ದೇಶದಲ್ಲಿ ಇಂದು 71,365 ಹೊಸ ಸೋಂಕಿತರು ಪತ್ತೆಯಾಗಿದ್ದರೆ, 1,217 ಮಂದಿ ಬಲಿಯಾಗಿದ್ದಾರೆ.
ಒಟ್ಟು ಸೋಂಕಿತರ ಸಂಖ್ಯೆ 4,24,10,976ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 5,05,279ಕ್ಕೆ ತಲುಪಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 8,92,828ಕ್ಕೆ ತಲುಪಿದೆ.
ಕಳೆದ 24 ಗಂಟೆಗಳಲ್ಲಿ , 1,72,211 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,10,12,869ಕ್ಕೆ ತಲುಪಿದೆ.
