Breaking NewsLatestರಾಷ್ಟ್ರೀಯಸುದ್ದಿ
India Covid Cases: ಒಂದೇ ದಿನದಲ್ಲಿ ಬರೋಬ್ಬರಿ 90 ಸಾವಿರ ಕೋವಿಡ್ ಕೇಸ್ ಪತ್ತೆ

ನವದೆಹಲಿ: ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 90, 928 ಸಾವಿರ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ.
ಈ ಕುರಿತು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಈ ಮೂಲಕ ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 3,51,09,286 ಕ್ಕೆ ಏರಿಕೆಯಾಗಿದೆ. ಹಾಗೆಯೇ 325 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ 4,82,876ಕ್ಕೆ ಏರಿಕೆಯಾಗಿದೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 2,85,401ಕ್ಕೆ ಏರಿಕೆಯಾಗಿದೆ. 19,206 ಮಂದಿ ಕೊರೊನಾದಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟಾರೆ ಗುಣಮುಖರಾದವರ ಸಂಖ್ಯೆ 3,43,41,009ಕ್ಕೆ ಏರಿದೆ.
ಇನ್ನು ದೇಶದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 2630ಕ್ಕೆ ಏರಿಕೆಯಾಗಿದ್ದು, ಈ ಪೈಕಿ 955ಮಂದಿ ಗುಣಮುಖರಾಗಿದ್ದಾರೆ. ಮಹಾರಾಷ್ಟ್ರದಲ್ಲಿ 797 ದೆಹಲಿಯಲ್ಲಿ 465 ಗುಜರಾತ್ ನಲ್ಲಿ 204 ಒಮಿಕ್ರಾನ್ ಪ್ರಕರಣಗಳಿವೆ.
